ನಾಳೆ(ಡಿ.16) ಕಡಬದಲ್ಲಿ 17ನೇ ಕನ್ನಡ ಸಾಹಿತ್ಯ ಸಮ್ಮೇಳನ ► ಅವಿಭಜಿತ ಪುತ್ತೂರು ತಾಲೂಕಿನ ಕೊನೆಯ ಕನ್ನಡ ಸಾಹಿತ್ಯ ಸಮ್ಮೇಳನ

(ನ್ಯೂಸ್ ಕಡಬ) newskadaba.com ಕಡಬ, ಡಿ.15. ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಅವಿಭಜಿತ ಪುತ್ತೂರು ತಾಲೂಕಿನ 17 ನೇ ಹಾಗೂ ಕೊನೆಯ ಕನ್ನಡ ಸಾಹಿತ್ಯ ಸಮ್ಮೇಳನ ಕಡಬದ ಸರಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಡಿಸೆಂಬರ್ 16 ನೇ ಶನಿವಾರದಂದು ಬೆಳಿಗ್ಗಿನಿಂದ ಸಂಜೆಯ ತನಕ ನಡೆಯಲಿದೆ.

ಕಡಬದಲ್ಲಿ ಇದು ತಾಲೂಕು ಮಟ್ಟದ ಎರಡನೇ ಸಾಹಿತ್ಯ ಸಮ್ಮೇಳನವಾಗಿದೆ. ಕಡಬ ಈಗಾಗಲೇ ತಾಲೂಕು ಕೇಂದ್ರವಾಗಿ ಘೋಷಣೆಯಾಗಿದ್ದು ಬರುವ ಜನವರಿ ತಿಂಗಳಿನಿಂದ ಪೂರ್ಣ ಪ್ರಮಾಣದ ತಾಲೂಕಾಗಿ ಅನುಷ್ಟಾನವಾಗಲಿರುವುದರಿಂದ ಕಡಬದಲ್ಲಿ ಪುತ್ತೂರು ತಾಲೂಕಿನ ಸಾಹಿತ್ಯ ಸಮ್ಮೇಳನ ಕೊನೆಯದಾಗಲಿದ್ದು, ಬರುವ ವರ್ಷದಿಂದ ಕಡಬ ತಾಲೂಕಿನಲ್ಲಿ ಸ್ವತಂತ್ರವಾಗಿ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಕಡಬ ಸರಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಬಿ.ಟಿ.ಆರಿಗ ಜೈನ್ ಸಭಾಂಗಣದಲ್ಲಿ ಕುಲ್ಕುಂದ ಶಿವರಾಮ ವೇದಿಕೆಯಲ್ಲಿ ಅದ್ದೂರಿಯಾಗಿ ಸಾಹಿತ್ಯ ಸಮ್ಮೇಳನ ನಡೆಸಲು ಎಲ್ಲಾ ಸಿದ್ದತೆಗಳನ್ನು ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಹಾಗೂ ಎಲ್ಲಾ ಇತರ ಸಮಿತಿಗಳು ನಡೆಸುತ್ತಿವೆ. ದಶಂಬರ್ 16 ನೇ ಶನಿವಾರ ಏರು ಹಗಲು 8.00 ಕ್ಕೆ ಕನ್ನಡ ಭುವನೇಶ್ವರಿಯ ದಿಬ್ಬಣ ಕಡಬ ಸೈಂಟ್ ಜೋಕಿಮ್ಸ್‌ ಶಾಲಾ ಆವರಣದಿಂದ ಹೊರಟು ಸಮ್ಮೇಳನ ನಡೆಯುವ ಬಿ.ಟಿ.ಆರಿಗ ಜೈನಿ ಸಭಾಂಗಣದಲ್ಲಿ ಸಮಾಪನಗೊಳ್ಳಲಿದೆ.

ಮೆರವಣಿಗೆಯನ್ನು ಕಡಬ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಾಬು ಮುಗೇರ ಉದ್ಘಾಟಿಸಲಿದ್ದಾರೆ. ತಾಲೂಕು ಪಂಚಾಯಿತಿ ಸದಸ್ಯ ಫಝಲ್ ಕೋಡಿಂಬಾಳ ಕನ್ನಡ ಭುವನೇಶ್ವರಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ. ಬಳಿಕ ಏರು ಹಗಲು 9.15 ಕ್ಕೆ ಜಿಲ್ಲಾ ಪಂಚಾಯಿತಿ ಸದಸ್ಯ ಪಿ.ಪಿ.ವರ್ಗೀಸ್ ಅವರಿಂದ ರಾಷ್ಟ್ರ ಧ್ವಜಾರೋಹಣ, ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಅವರಿಂದ ಪರಿಷತ್ತು ಧ್ವಜಾರೋಹಣ, ಪುತ್ತೂರು ತಾಲೂಕು ಪಂಚಾಯಿತಿ ಅಧ್ಯಕ್ಷೆ ಭವಾನಿ ಚಿದಾನಂದ ಅವರಿಂದ ಸಮ್ಮೇಳನ ಧ್ವಜಾರೋಹಣ ನಡೆದು ಕಡಬ ಸರಕಾರಿ ಪದವಿಪುರ್ವ ಕಾಲೇಜಿನ ಪ್ರೌಢ ಶಾಲಾ ವಿದ್ಯಾರ್ಥಿಗಳಿಂದ ರಾಷ್ಟ್ರಗೀತೆ ಮೊಳಗಲಿದೆ.

Also Read  ಪಾಕ್ ಸೇನೆಯಿಂದ ಗುಂಡಿನ ದಾಳಿ ➤ ಓರ್ವ ಭಾರತೀಯ ಸೈನಿಕ ಹುತಾತ್ಮ,ಇಬ್ಬರಿಗೆ ಗಾಯ

ಏರುಹಗಲು 9.45 ರಿಂದ 11.30 ರ ತನಕ ಸಮ್ಮೇಳನಾಧ್ಯಕ್ಷ ನಾ,ಕಾರಂತ ಪೆರಾಜೆ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮ್ಮೇಳನದ ಉದ್ಘಾಟನಾ ಸಮಾರಂಭ ನಡೆಯಲಿದ್ದು ದೂರದರ್ಶನದ ವಿಶ್ರಾಂತ ಹೆಚ್ಚುವರಿ ಮಹಾನಿರ್ದೆಶಕ ಡಾ|ಮಹೇಶ್ ಜೋಷಿ ಉದ್ಘಾಟನೆ ನೆರವೇರಿಸಲಿದ್ದಾರೆ. ಸುಳ್ಯ ಶಾಸಕ ಎಸ್.ಅಂಗಾರ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಪುಸ್ತಕ ಪ್ರದರ್ಶನ ಉದ್ಘಾಟಿಸಲಿದ್ದಾರೆ. ಪುತ್ತೂರು ಶಾಸಕಿ ಶಕುಂತಳಾ ಟಿ. ಶೆಟ್ಟಿ ವಸ್ತಪ್ರದರ್ಶನ ಉದ್ಘಾಟಿಸಲಿದ್ದಾರೆ. ಕಡಬ ಸರಕಾರಿ ಪದವಿಪುರ್ವ ಕಾಲೇಜಿನ ಕಾರ್ಯಾಧ್ಯಕ್ಷ ಕೃಷ್ಣ ಶೆಟ್ಟಿ  ಕಲಾಪ್ರದರ್ಶನ ಉದ್ಘಾಟಿಸಲಿದ್ದಾರೆ. ತಾಲೂಕು ಸಾಹಿತ್ಯ ಸಮ್ಮೇಳನದ ನಿಕಟಪುರ್ವಾಧ್ಯಕ್ಷ ಪ್ರೊ.ಹರಿನಾರಯಣ ಮಾಡವು, ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಮಂಗಳೂರು ಸಾರ್ವಜನಿಕ ಶಿಕ್ಷಣ ಇಲಾಖಾ ವಿದ್ಯಾಂಗ ಉಪನರ್ದೆಶಕ ವೈ.ಶಿವರಾಮಯ್ಯ, ಪುತ್ತೂರು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಗದೀಶ್ ಎಸ್, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಸುಕನ್ಯಾ ಡಿ.ಎನ್ ಕಡಬ ವಿಶೇಷ ತಹಶಿಲ್ದಾರ್ ಜಾನ್ ಪ್ರಕಾಶ್ ಮೊದಲಾದವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಏರು ಹಗಲು 11.35 ರಿಂದ 11.50 ತನಕ ನೂಜಿಬಾಳ್ತಿಲ ಬೆಥನಿ ಪದವಿಪುರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಏರುಹಗಲು 11.50 ರಿಂದ 12.15 ರ ತನಕ ವಿಶೇಷ ಕಾರ್ಯಕ್ರಮ ನಡೆಯಲಿದ್ದು ಪರ್ತಕರ್ತ ನಾಗರಾಜ್ ಎನ್.ಕೆ. ಕಡಬ ಪರಿಸರದ ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಎನ್ನುವ ವಿಷಯದ ಬಗ್ಗೆ ಮಾತನಾಡಲಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪುತ್ತೂರು ತಾಲೂಕು ಯೋಜನಾಧಿಕಾರಿ ಧರ್ನಪ್ಪ ಮೂಲ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.  ಏರು ಹಗಲು 12.15 ರಿಂದ 1.15 ರ ತನಕ ಕವಿಗೋಷ್ಠಿ ನಡೆಯಲಿದ್ದು ಹಿರಿಯ ಕವಿ ಟಿ.ಜಿ.ಮುಡೂರು ಗೋಷ್ಠಿಯ ಅಧ್ಯಕ್ಷತೆವಹಿಸಲಿದ್ದಾರೆ, ಕವಿತಾ ಅಡೂರು, ನಾರಾಯಣ ರೈ ಕುಕ್ಕುವಳ್ಳಿ, ಪಿ.ಎಸ್.ನಾರಾಯಣ ಕೊೖಲ ಸೇರಿದಂತೆ ಹನ್ನೆರಡು ಜನ ಕವಿಗಳು ಕವಿಗೋಷ್ಠಿ ನಡೆಸಿಕೊಡಲಿದ್ದಾರೆ. ಇಳಿ ಹಗಲು 1.15 ರಿಂದ 2.00 ಗಂಟೆಯ ತನಕ ಕಡಬ ಸರಕಾರಿ ಪದವಿಪುರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಇಳಿಹಗಲು 2.00 ರಿಂದ 2.45 ರ ತನಕ ವಿಶೇಷ ಉಪನ್ಯಾಸ ಮತ್ತು ಹೊಸ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ.

Also Read  ಮಂಗಳೂರು ವಿವಿ: ಪ್ರವೇಶಾತಿಗೆ ಅರ್ಜಿ ಆಹ್ವಾನ

ಶತಮಾನದ ನೆನಪು: ವಾಣಿಯವರ ಬದುಕು ಮತ್ತು ಬರಹ ವಿಷಯದಲ್ಲಿ ವಿವೇಕಾನಂದ ಕಾಲೇಜಿನ ಉಪನ್ಯಾಸಕಿ ಡಾ|ಶೋಭಿತಾ ಸತೀಶ್ ಉಪನ್ಯಾಸ ನೀಡಲಿದ್ದಾರೆ. ಸಮ್ಮೇಳನಾಧ್ಯಕ್ಷ ನಾ.ಕಾರಂತ ಪೆರಾಜೆ ಅವರು  ವಿವಿಧ ಸಾಹಿತಿಗಳ ಕೃತಿಗಳನ್ನು ಬಿಡುಗಡೆ ಮಾಡಲಿದ್ದಾರೆ. ಬೆಂಗಳೂರಿನ ಪ್ರಾಧ್ಯಾಪಕ ಡಾ| ಕೆ.ಎಂ.ಮ್ಯಾಥ್ಯೂ ಹಾಗೂ ಕಡಬದ ಹಿರಿಯ ವೈದ್ಯ ಡಾ|ಸಿ.ಕೆ.ಶಾಸ್ತ್ರಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. 2.45 ರಿಂದ 3.00 ಗಂಟೆಯ ತನಕ ಕಡಬ ಸೈಂಟ್ ಜೋಕಿಮ್ಸ್‌ ಪದವಿಪುರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. 3.00 ರಿಂದ 3.20ರ ತನಕ ಸಾಹಿತಿ ಗೋಪಾಲ್ ರಾವ್ ಕಡಬ ಅವರ ಸಂಸ್ಮರಣೆ ನಡೆಯಲಿದೆ. 3.20 ರಿಂದ 4.20 ರ ತನಕ ವಿವಿಧ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಸವಣೂರು ವಿದ್ಯಾರಶ್ಮಿ ಸಮೂಹ ಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಅವರು ಸನ್ಮಾನ ಕಾರ್ಯ ನಡೆಸಲಿದ್ದಾರೆ. ಕಡಬದ ಹಿರಿಯ ಉದ್ಯಮಿ ಸಿ.ಪಿಲಿಫ್ ಅತಿಥಿಯಾಗಿ ಭಾಗವಹಿಸಲಿದ್ದಾರೆ. 4.20 ರಿಂದ 4.40 ರ ತನಕ ಕಡಬ ಸೈಂಟ್ ಆನ್ಸ್‌ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. 4.40 ರಿಂದ 6.10 ರ ತನಕ ಸಮಾರೋಪ ಸಮಾರಂಭ ನಡೆಯಲಿದ್ದು ಪ್ರದೀಪ್ ಕುಮಾರ್ ಕಲ್ಕೂರ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ಆಕಾಶವಾಣಿಯ ಕಾರ್ಯಕ್ರಮ ನಿರ್ಮಾಪಕ ಡಾ| ಸದಾನಂದ ಪೆರ್ಲ ಸಮಾರೋಪ ಭಾಷಣ ಮಾಡಲಿದ್ದಾರೆ. ಸಮ್ಮೇಳನಾಧ್ಯಕ್ಷರು ಮಾತನಾಡಲಿದ್ದಾರೆ. ಪುತ್ತೂರಿನ ಮುಳಿಯ ಶ್ಯಾಮ್ ಭಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೆಶಕ ಚಂದ್ರಹಾಸ ರೈ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬಳಿಕ ನಡೆಯುವ ಸಾಂಸ್ಕತಿಕ ಕಾರ್ಯಕ್ರಮದಲ್ಲಿ ಕಡಬ ಪದವಿ ಪುರ್ವ ಕಾಲೇಜು ಹಾಗೂ ನೃತ್ಯ ನಿನಾದ ಕಡಬ ಅವರಿಂದ ಕರ್ನಾಟಕ ವೈಭವ ಕಾರ್ಯಕ್ರಮ ನಡೆಯಲಿದೆ ಎಂದು ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ ಮಹಮ್ಮದ್ ಕುಂಞಿ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಐತ್ತಪ್ಪ ನಾಯ್ಕ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಸ್ವಚ್ಚಗೊಳಿಸಲೆಂದು ಬಾವಿಗೆ ಇಳಿದ ವ್ಯಕ್ತಿ ➤ಅಗ್ನಿಶಾಮಕ ದಳದಿಂದ ರಕ್ಷಣೆ

error: Content is protected !!
Scroll to Top