ಟ್ರಕ್ ಗೆ ಬಸ್ ಢಿಕ್ಕಿ ➤ 10 ಮಂದಿ ಮೃತ್ಯು,ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ಜ. 13.  ಬಸ್ಸೊಂದು ಟ್ರಕ್ ಗೆ ಢಿಕ್ಕಿ ಹೊಡೆದ ಪರಿಣಾಮ 10 ಮಂದಿ ಮೃತಪಟ್ಟ ಹಾಗೂ ಹಲವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಶುಕ್ರವಾರದಂದು ವರದಿಯಾಗಿದೆ.

ಪ್ರಾಥಮಿಕ ವರದಿಯ ಪ್ರಕಾರ ಮೃತರನ್ನು 7 ಮಹಿಳೆಯರು, ಇಬ್ಬರು ಸಣ್ಣ ಹುಡುಗರು ಹಾಗೂ ಓರ್ವ ಪುರುಷ ಎಂದು ಗುರುತಿಸಲಾಗಿದೆ. ಗಾಯಳುಗಳನ್ನು ಸಿನ್ನಾರ್ ಗ್ರಾಮಾಂತರ ಆಸ್ಪತ್ರೆಗೆ ಹಾಗೂ ಸಿನ್ನಾರ್ ನಲ್ಲಿರುವ ಯಶವಂತ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ನಾಸಿನ್- ಶಿರಡಿ ಹೆದ್ದಾರಿಯಲ್ಲಿ ಪಥರೆ ಗ್ರಾಮದ ಬಳಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಮೃತರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಕಚೇರಿ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ.

Scroll to Top