ಬಾಂಬ್ ಸ್ಫೋಟ ➤ ಓರ್ವನಿಗೆ ಗಾಯ



(ನ್ಯೂಸ್ ಕಡಬ) newskadaba.com ಕೇರಳ, ಜ. 13.   ಮನೆಯೊಂದರಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಶುಕ್ರವಾರದಂದು  ವರದಿಯಾಗಿದೆ.





ಗಾಯಗೊಂಡ ವ್ಯಕ್ತಿಯನ್ನು ಜಿತಿನ್ ನಾಡಮ್ಮಾಲ್ ಎಂದು ಗುರುತಿಸಲಾಗಿದೆ. ಇವರಿಗೆ ಸ್ಥಳೀಯ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಇದೀಗ ಅವರನ್ನು ಕಣ್ಣೂರು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ. ಮನೆಯಲ್ಲಿ ಒಂದಕ್ಕಿಂತ ಹೆಚ್ಚು ಬಾಂಬ್‌ಗಳು ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆಂದು ಪೊಲೀಸ್ ಆಯುಕ್ತ ಅಜಿತ್ ಕುಮಾರ್ ತಿಳಿಸಿದ್ದಾರೆ.






error: Content is protected !!
Scroll to Top