➤ ಖ್ಯಾತ ಬರಹಗಾರ್ತಿ ಸಾರಾ ಅವರನ್ನು ಅವಗಣಿಸಿದ ಸರಕಾರ ➤ ಜಿಲ್ಲಾಡಳಿತ ಖಂಡನೆ!

(ನ್ಯೂಸ್ ಕಡಬ) newskadaba.com, ಮಂಗಳೂರು, ಜ. 13.  ಖ್ಯಾತ ಬರಹಗಾರ್ತಿ ಸಾರಾ ಅಬೂಬಕ್ಕರ್ ಅವರು ನಿಧನ ಹೊಂದಿದ ಸಂದರ್ಭದಲ್ಲಿ ಸರಿಯಾದ ಗೌರವ ಸಲ್ಲಿಸದೆ ರಾಜ್ಯ ಸರಕಾರ ಹಾಗೂ ದ.ಕ ಜಿಲ್ಲಾಡಳಿತ ಅವಗಣಿಸಿರುವುದು ಖೇದಕರ ಹಾಗೂ ಖಂಡನೀಯ ಎಂದು ಹಲವು ಮುಖಂಡರು ತಿಳಿಸಿದ್ದಾರೆ.

ಕರ್ನಾಟಕದ ಮುಸ್ಲಿಂ ಸಮುದಾಯ ಕನ್ನಡದಲ್ಲಿ ಸಾಹಿತ್ಯಕೃಷಿ ನಡೆಸುವುದೇ ಅಪರೂಪವಾಗಿದ್ದ ಈ ಕಾಲಘಟ್ಟದಲ್ಲಿ ಆ ಸಮುದಾಯದ ಹೆಣ್ಣು ಮಗಳು ಕನ್ನಡ ಸಾಹಿತ್ಯ ಲೋಕಕ್ಕೆ ಪ್ರವೇಶ ಪಡೆದದ್ದು, ದೊಡ್ಡ ಸಾಧನೆಯಾಗಿದೆ. ಮಹಿಳಾಪರ ಹೋರಾಟಗಳಲ್ಲಿಯೂ ತೊಡಗಿಸಿಕೊಂಡ ಹೆಗ್ಗಳಿಕೆ ಸಾರಾ ಅವರದ್ದು. ಅದುದ್ದರಿಂದ ಅವರಿಗೆ ಸರಕಾರಿ ಗೌರವಗಳು ಸಲ್ಲಬೇಕಿತ್ತು ಎಂದು ಬಿ.ಎಂ. ರೋಹಿಣಿ, ಪ್ರೊ. ಪಟ್ಟಾಭಿರಾಮ ಸೋಮಯಾಜಿ, ಎಂ. ದೇವದಾಸ್, ಬಿ.ಎಂ.ಹನೀಫ್, ವಾಸುದೇವ ಉಚ್ಚಿಲ, ಡಾ.ಬಿ ಶ್ರೀನಿವಾಸ ಕಕ್ಕಿಲ್ಲಾಯ, ಗುಲಾಬಿ ಬಿಳಿಮಲೆ ಮೊದಲಾದವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top