(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.13. ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ ಅಲಿಯಾಸ್ ಮಂಜುನಾಥ್ ನನ್ನು ಪೊಲೀಸರು ಗುಜಾರಾತ್ ನಲ್ಲಿ ಬಂಧಿಸಿರುವುದಾಗಿ ವರದಿಯಾಗಿದೆ.

ವಿವಿಧ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಸ್ಯಾಂಟ್ರೋ ರವಿಯ ಬಂಧನಕ್ಕೆ ರಾಜ್ಯ ಪೊಲೀಸರ ವಿಶೇಷ ತಂಡವೊಂದು ಕಾರ್ಯಾಚರಣೆ ನಡೆಸಿ, ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಸ್ಯಾಂಟ್ರೋ ರವಿಯ ಕಾರು ಚಾಲಕ ಗಿರೀಶ್ ನನ್ನು ವಶಕ್ಕೆ ತೆಗೆದುಕೊಂಡು ತೀವ್ರ ವಿಚಾರಣೆ ನಡೆಸಲಾಗಿತ್ತು. ಬಳಿಕ ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ.














