ನಟಿ ಉರ್ಫಿಯನ್ನು ವಿಚಾರಣೆಗೆ ಕರೆದ ಮುಂಬೈ ಪೊಲೀಸರು   

(ನ್ಯೂಸ್ ಕಡಬ) newskadaba.com  ಮುಂಬೈ, ಜ.14. ಬಟ್ಟೆಯ ಕಾರಣದಿಂದಲೇ ಸಿಕ್ಕಾಪಟ್ಟೆ ಸುದ್ದಿಯಲ್ಲಿರುವ ನಟಿ ಉರ್ಫಿ ಜಾವೇದ್‌ರನ್ನು ಮುಂಬೈ ಪೊಲೀಸರು ವಿಚಾರಣೆಗೆ ಕರೆದಿದ್ದಾರೆ ಎಂದು ತಿಳಿದುಬಂದಿದೆ. ಮುಂಬೈನ ಬೀದಿಗಳಲ್ಲಿ ತಮ್ಮ ದೇಹವನ್ನು ಪ್ರದರ್ಶನ ಮಾಡಿಕೊಂಡು ಓಡಾಡುತ್ತಾರೆ. ಹೀಗಾಗಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಮಹಾರಾಷ್ಟ್ರ ಬಿಜೆಪಿಯ ಮಹಿಳಾ ಮೋರ್ಚಾದ ಅಧ್ಯಕ್ಷೆ ಚಿತ್ರಾ ಕಿಶೋರ್‌ ವಾಘ್‌ ದೂರು ನೀಡಿದ್ದರು.

ಅದನ್ನು ಖಂಡಿಸಿ ಮಹಿಳಾ ಮೋರ್ಚಾ ಅಧ್ಯಕ್ಷೆ ಚಿತ್ರಾ ಕಿಶೋರ್ ತಮಗೆ ಜೀವ ಬೆದರಿಕೆ ಹಾಕಿದ್ದು ಹಾಗೂ ಮಾನಹಾನಿ ಮಾಡುವಂತಹ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿ ನತಮ್ಮ ವಕೀಲರ ಮೂಲಕ ನಟಿ ಉರ್ಫಿ ಜಾವೇದ್ ಮಹಾರಾಷ್ಟ್ರ ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ನೀಡಿದ ದೂರಿನ ಸಂಬಂಧ, ವಿಚಾರಣೆಗೆ ಹಾಜರಾಗುವಂತೆ ಉರ್ಫಿ ಜಾವೇದ್‌ ಅವರಿಗೆ ತಿಳಿಸಿದ್ದೇವೆ ಎಂದು ಮುಂಬೈ ಪೊಲೀಸರು ಮಾಹಿತಿ ನೀಡಿದ್ದಾರೆ.

Also Read  ಪ್ರಮಾಣ ವಚನ ಸ್ವೀಕರಿಸಿದ ದಿನವೇ ಬಿಗ್ ಶಾಕ್ ನೀಡಿದ ಬಿಜೆಪಿ ಸರಕಾರ

 

error: Content is protected !!
Scroll to Top