ರಾಜ್ಯದ ಝೂಗಳಿಂದ 9 ತಿಂಗಳಲ್ಲಿ 75.72 ಕೋಟಿ ರೂ. ಆದಾಯ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.16. ಕಳೆದ 9 ತಿಂಗಳಲ್ಲಿ ಕರ್ನಾಟಕ ರಾಜ್ಯ ಮೃಗಾಲಯ ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಮೃಗಾಲಯಗಳಿಂದ 75.72 ಕೋಟಿ ರೂ. ಆದಾಯ ಸಂಗ್ರಹವಾಗಿದೆ.


”ಕೋವಿಡ್‌ ಬಳಿಕ ಮೃಗಾಲಯಗಳಿಗೆ ಪ್ರವಾಸಿಗರ ಭೇಟಿ ಹೆಚ್ಚಾಗುತ್ತಿರುವುದರಿಂದ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತಿದೆ,” ಎಂದು ಪ್ರಾಧಿಕಾರದ ಅಧ್ಯಕ್ಷ ಎಂ.ಶಿವಕುಮಾರ್‌ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಎಲ್ಲಾ ಮೃಗಾಲಯಗಳಿಗೆ 52,77,013 ಮಂದಿ ಪ್ರವಾಸಿಗರು ಭೇಟಿ ನೀಡಿದ್ದಾರೆ. ಮೈಸೂರು ಮೃಗಾಲಯಕ್ಕೆ ಡಿಸೆಂಬರ್‌ ತಿಂಗಳೊಂದರಲ್ಲೇ 5.24 ಲಕ್ಷ ಮಂದಿ ಭೇಟಿ ನೀಡಿರುವುದು ದಾಖಲೆಯಾಗಿದೆ,” ಎಂದರು.

Also Read  ಉದ್ಯಮ ನೋಂದಣಿ ಪ್ರಮಾಣ ಪತ್ರ - ಕಡ್ಡಾಯ

 

error: Content is protected !!
Scroll to Top