ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಊಟ ಸೇವನೆ..! ➤ 60 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಜ.17. ಇಲ್ಲಿನ ಗೊಂದಿಚಟ್ನಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಊಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಊಟ ಸೇವನೆ ಮಾಡಿದ ನಂತರ ಅಸ್ವಸ್ಥಗೊಂಡ ಘಟನೆ ವರದಿಯಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


ಶಿವಮೊಗ್ಗದ ತಾಲೂಕಿನ ಗೊಂದಿಚಟ್ನಹಳ್ಳಿಯ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ಮಧ್ಯಾಹ್ನದ ನಂತರ ಒಬ್ಬರ ಬಳಿಕ ಇನ್ನೊಬ್ಬರು ಅಸ್ವಸ್ಥರಾಗಿದ್ಧಾರೆ. ಹೀಗೆ ಒಟ್ಟು 60 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಬಗ್ಗೆ ವರದಿಯಾಗಿದೆ. ಅಸ್ವಸ್ಥರಾದ ಮಕ್ಕಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐದಕ್ಕೂ ಹೆಚ್ಚು ವೈದ್ಯರು ಹಾಗು ಸಿಬ್ಬಂದಿ ಮಕ್ಕಳ ಆರೋಗ್ಯ ತಪಾಸಣೆಯನ್ನು ನಡೆಸುತ್ತಿದ್ಧಾರೆ.

Also Read  ಮಂಗಳೂರು ದಸರಾ ಉತ್ಸವಕ್ಕೆ ತೆರೆ ➤ ಸರಳವಾಗಿ ಸಂಪ್ನನಗೊಂಡ ನವರಾತ್ರಿ

 

error: Content is protected !!
Scroll to Top