(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.17. ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ಹತ್ಯೆಗೀಡಾದ ದಿವಂಗತ ಆರ್‌ಟಿಐ ಕಾರ್ಯಕರ್ತ ಆರ್. ಮೂರ್ತಿ ಅವರ ಕುಟುಂಬ, ಮೂರ್ತಿ ಅವರ ಹತ್ಯೆಗೆ ರಾಜ್ಯದ ಪೊಲೀಸ್ ಇಲಾಖೆಯೇ ಹೊಣೆ ಎಂದು ಆರೋಪಿಸಿದೆ. ಇದೇ ವೇಳೆ ರಾಜ್ಯದಲ್ಲಿ ಆರ್‌ಟಿಐ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ ನಡೆಸುವುದಾಗಿ ಆರ್‌ಟಿಐ ಕಾರ್ಯಕರ್ತರ ವೇದಿಕೆ ಎಚ್ಚರಿಕೆ ನೀಡಿದೆ.
ಬೆಂಗಳೂರಿಗೆ ಸಮೀಪದಲ್ಲಿರುವ ಕನಕಪುರ ಪಟ್ಟಣದ ಸಮೀಪದ ಕುರುಬಳ್ಳಿದೊಡ್ಡಿ ಗ್ರಾಮದ ನಿವಾಸಿ ಮೂರ್ತಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಮೂರ್ತಿ ಅವರು ಗ್ರಾಮದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ (ಎಂಜಿಎನ್‌ಆರ್‌ಇಜಿಎಸ್) ಕೈಗೊಂಡಿರುವ ಸಿವಿಲ್ ಕಾಮಗಾರಿಗಳ ವಿವರಗಳನ್ನು ಸಂಗ್ರಹಿಸಿ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. ಈ ಆರೋಪದ ಬಗ್ಗೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂರ್ತಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.