ಬಂಟ್ವಾಳ: ಯುವ ವಕೀಲರ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಅಧಿಕಾರಿಗೆ ತರಾಟೆಗೆ ತೆಗೆದುಕೊಂಡ ಹೈಕೋರ್ಟ್ !! ➤  3 ಲಕ್ಷ ಪರಿಹಾರ ಕೊಡುವಂತೆ ಸೂಚನೆ..!

(ನ್ಯೂಸ್ ಕಡಬ)newskadaba.com  ಬಂಟ್ವಾಳ, ಜ.20. ಯುವ ವಕೀಲ ಕುಲದೀಪ್‌ ಶೆಟ್ಟಿ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತ ವಕೀಲರಿಗೆ 3 ಲಕ್ಷ ರೂ ಪರಿಹಾರ ನೀಡುವಂತೆ ಪುಂಜಾಲಕಟ್ಟೆ ಪೊಲೀಸರಿಗೆ ಹೈಕೋರ್ಟ್‌ ಸೂಚನೆ ನೀಡಿದೆ. ಸಿವಿಲ್ ಸ್ವರೂಪದ ವ್ಯಾಜ್ಯದಲ್ಲಿ ಮಧ್ಯಪ್ರವೇಶಿಸಿ ವಕೀಲರೊಬ್ಬರ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

ದಂಡದ ಮೊತ್ತವನ್ನು ತಪ್ಪಿತಸ್ಥ ಪೊಲೀಸರಿಂದ ವಸೂಲಿ ಮಾಡುವಂತೆ ಸರಕಾರಕ್ಕೆ ನಿರ್ದೇಶನ ನೀಡಿದೆ. ಪೊಲೀಸರ ನಡೆ ವಿರುದ್ಧ ನ್ಯಾಯಾಲಯ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ, ವಕೀಲ ಕುಲದೀಪ್‌ಗೆ 3 ಲಕ್ಷ ರೂ.ಪರಿಹಾರ ನೀಡಬೇಕು. ಆ ಮೊತ್ತವನ್ನು ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವೇತನದಿಂದ ವಸೂಲಿ ಮಾಡಬೇಕು ಎಂದು ಆದೇಶಿಸಿದೆ.

Also Read  ಮಾರ್- ಇವಾನಿಯೋಸ್ ಕಾಲೇಜು: 'ಲಿಂಗತ್ವ, ಶಾಲೆ ಮತ್ತು ಸಮಾಜ' ಎಂಬ ವಿಷಯದ ಕುರಿತು ವಿಚಾರ ಸಂಕಿರಣ

 

error: Content is protected !!
Scroll to Top