ಮಂಗಳೂರು: ಗಸ್ತು ನಿರತ ಪೊಲೀಸರ ಮೇಲೆ ಹಲ್ಲೆ



(ನ್ಯೂಸ್ ಕಡಬ)newskadaba.com  ಮಂಗಳೂರು, ಜ 21. ಗಸ್ತು ನಿರತ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಐವರ ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ. ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸ್ ಕಾನ್‌ಸ್ಟೇಬಲ್ ಮಲ್ಲಿಕಾರ್ಜುನ ಅಂಗಡಿ ಮತ್ತು ಪ್ರದೀಪ್ ನಾಗನ ಗೌಡರೊಂದಿಗೆ ಗಸ್ತು ನಿರತರಾಗಿದ್ದಾಗ ತುಪ್ಪೆಕಲ್ಲಿನ ಕಾಂಕ್ರಿಟ್ ರಸ್ತೆಯ ಬಳಿಯ ಖಾಲಿ ಸ್ಥಳದಲ್ಲಿ ಮಾರುತಿ ಸುಝುಕಿ ಬಿಳಿ ಬಣ್ಣದ ಆಲ್ಟೋ ಕಾರೊಂದರ ಬಳಿ ಇಬ್ಬರು ಅಪರಿಚಿತರು ನಿಂತಿದ್ದರು. ಮತ್ತು ಕಾರಿನೊಳಗೆ ಮೂವರಿದ್ದರು ಎನ್ನಲಾಗಿದೆ.







ಗಸ್ತು ಕರ್ತವ್ಯದಲ್ಲಿದ್ದ ಮಲ್ಲಿಕಾರ್ಜುನ ಅಂಗಡಿಯವರು ಅವರನ್ನು ಪ್ರಶ್ನಿಸಿದಾಗ ಅವರು ಏಕಾಏಕಿ ಕಲ್ಲುಗಳನ್ನು ಪೊಲೀಸರತ್ತ ಎಸೆದು, ಕಾರನ್ನು ಪೊಲೀಸರ ಮೇಲೆ ಹತ್ತಿಸಲು ಯತ್ನಿಸಿದ್ದಾರೆ. ಈ ವೇಳೆ ಇಬ್ಬರೂ ರಸ್ತೆಯ ಪಕ್ಕಕ್ಕೆ ಹಾರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ,ಆರೋಪಿಗಳು ಕರ್ತವ್ಯಕ್ಕೆ ಅಡ್ಡಿಪಡಿಸಿ ಕಲ್ಲು ಎಸೆದು, ಕಾರು ಹಾಯಿಸಿ, ಕೊಲೆಗೆ ಯತ್ನಿಸಿರುವುದಾಗಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ.






 

 

error: Content is protected !!
Scroll to Top