➤ ಸ್ಯಾಂಡಲ್ ವುಡ್ ನ ಖ್ಯಾತ ನಟ ಲಕ್ಷ್ಮಣ್ ಹೃದಯಾಘಾತದಿಂದ ನಿಧನ!

(ನ್ಯೂಸ್ ಕಡಬ) newskadaba.com, ಬೆಂಗಳೂರು, ಜ. 23. ಬೆಂಗಳೂರು ಚಂದನವನದ ಖ್ಯಾತ ಪೋಷಕ ನಟ ಲಕ್ಷ್ಮಣ್ (74) ಇಂದು ನಿಧನರಾಗಿದ್ದಾರೆ.  ಬೆಂಗಳೂರಿನ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಇವರು ಅಂತ, ಮಲ್ಲ, ಯಜಮಾನ, ಸೂರ್ಯವಂಶ, ಸಾಂಗ್ಲಿಯಾನ, ಸೇರಿದಂತೆ 300ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಲಕ್ಷ್ಮಣ್ ಅವರು ಹೆಚ್ಚಾಗಿ ಪೊಲೀಸ್ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಬೆಂಗಳೂರಿನಲ್ಲಿ ಜನಿಸಿದ ಲಕ್ಷ್ಮಣ್ ರವರ ತಂದೆ ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸಿದ್ದರು. ರಂಗಭೂಮಿ ಮೂಲಕ ಸಿನಿಮಾ ರಂಗಕ್ಕೆ ಕಾಲಿಟ್ಟಿದ್ದ ಲಕ್ಷ್ಮಣ್ ಹಲವಾರು ಸಿನಿಮಾಗಳಲ್ಲಿ ಮಿಂಚಿದ್ದರು.

Scroll to Top