ಕರಾವಳಿ‌ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗುವ ಸಂಭವ ➤ ಹವಾಮಾನ ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.24. ಮುಂದಿನ ಎರಡ್ಮೂರು ದಿನಗಳಲ್ಲಿ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಶೀತದ‌ ವಾತಾವರಣ ಕಡಿಮೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ ವಾರ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ ತಾಪಮಾನ ಕಡಿಮೆಯಾಗುವ ಸಾಧ್ಯತೆಯಿದೆ. ಮುಂದಿನ ವಾರದ ಅಂತ್ಯದ ವೇಳೆಗೆ ಶೀತ ಗಾಳಿಯ ಪರಿಸ್ಥಿತಿ ಸುಧಾರಿಸುವುದರಿಂದ ಕನಿಷ್ಠ ತಾಪಮಾನ ಹೆಚ್ಚಾಗಲಿದೆ ಎಂದು ಹೇಳಿದೆ. ಕರ್ನಾಟಕದಲ್ಲೂ ಮಳೆಯ ನಿರೀಕ್ಷೆಯಿದ್ದು, ಜ.24 ರಿಂದ 27ರವರೆಗೆ ಕರಾವಳಿ‌ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಚದುರಿದಂತೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಮಾಹಿತಿಯಿಂದ‌ ತಿಳಿದುಬಂದಿದೆ. ಕರಾವಳಿಯಲ್ಲಿ ಮೋಡ ಕವಿದ ವಾತಾವರಣವು ಇರುವ ಸಾಧ್ಯತೆ ಇದ್ದು, ಕೆಲವೆಡೆ ಹಗುರ ಮಳೆ ನಿರೀಕ್ಷಿಸಲಾಗಿದೆ.

 

error: Content is protected !!

Join the Group

Join WhatsApp Group