ಮಂಗಳೂರು: ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕ ಆತ್ಮಹತ್ಯೆ     

(ನ್ಯೂಸ್ ಕಡಬ)newskadaba.com ಮಂಗಳೂರು, ಜ.25. ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿಯವರ ವಾಹನ ಚಾಲಕ ಇಂದ್ರಾಳಿ ರೈಲ್ವೆ ಬ್ರಿಜ್ ಸನಿಹ ಚಲಿಸುತ್ತಿರುವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

ಮೃತರನ್ನು ಹೆಬ್ರಿ ಸಳಂಜೆ ಗ್ರಾಮದ ನಿವಾಸಿ ರಾಘವೇಂದ್ರ ಹೆಗ್ಡೆ ಎಂದು ಗುರುತಿಸಲಾಗಿದೆ. ವೈಯಕ್ತಿಕ ಕಾರಣದಿಂದ ಮನ ನೊಂದ ಇವರು, ಮಂಗಳೂರು ಮನಪಾ ಮುಖ್ಯ ಲೆಕ್ಕಾಧಿಕಾರಿಗೆ ಸಂಬಂಧಿಸಿದ ಕಾರನ್ನು ಅಲ್ಲೇ ಸಮೀಪ ನಿಲ್ಲಿಸಿ, ಬಳಿಕ ಚಲಿಸುತ್ತಿದ್ದ ರೈಲಿನಡಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಮೃತದೇಹ ಸಂಪೂರ್ಣ ಛಿದ್ರಗೊಂಡಿದೆ.

ಸ್ಥಳದಲ್ಲಿ ಪತ್ತೆಯಾದ ಕಾರಿನ ಹಸಿರು ಫಲಕದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿ ಎಂಬ ಉಲ್ಲೇಖ ಹಾಗೂ ಮೃತರ ಕಿಸೆಯಲ್ಲಿ ಆಧಾರ್ ಕಾರ್ಡ್ ಆಧಾರದಲ್ಲಿ ವ್ಯಕ್ತಿಯ ಗುರುತು ಪತ್ತೆ ಹಚ್ಚಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Also Read  ಅ. 31ರಂದು ಭಾವೈಕ್ಯತೆಯ ದೀಪಾವಳಿ ಆಚರಣೆ ದಶಮಾನ ಸಂಭ್ರಮದ ಅಂಗವಾಗಿ ವಿವಿಧ ಸ್ಪರ್ಧೆ

 

 

error: Content is protected !!
Scroll to Top