ಮಂಗಳೂರು: ಸಮಗ್ರ ಘನತ್ಯಾಜ್ಯ ನಿರ್ವಹಣಾ ಕೇಂದ್ರ ಲೋಕಾರ್ಪಣೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.26. ಜಿಲ್ಲಾ ಪಂಚಾಯತ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಎಡಪದವು ಗ್ರಾಮ ಪಂಚಾಯತ್ ನ ಸಂಯುಕ್ತಾಶ್ರಯದಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ನಿರ್ಮಾಣವಾದ ಸಮಗ್ರ ಘನತಾಜ್ಯ ನಿರ್ವಹಣಾ ಕೇಂದ್ರವನ್ನು ಜ.26ರಂದು ತೆಂಕ ಎಡಪದವು ಎಂ.ಆರ್.ಎಫ್ ಕೇಂದ್ರದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕøತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಲೋಕಾರ್ಪಣೆ ಮಾಡಿದರು.


ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಾ. ಭರತ್ ಶೆಟ್ಟಿ ವೈ.ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕುಮಾರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತ ಮದನ್ ಮೋಹನ್, ಜಿ.ಪಂ. ಉಪ ಕಾರ್ಯದರ್ಶಿ ಆನಂದ್ ಕುಮಾರ್ ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು ಎಂದು ತಿಳಿದುಬಂದಿದೆ.

Also Read  ವ್ಹೀಲ್ ಲಾಕ್ ಗೆ ಲಾಕ್ ಆದ ವಾಹನಗಳು ➤ ಕಡಬ ಪೊಲೀಸರ ಕಾರ್ಯಚರಣೆ

error: Content is protected !!
Scroll to Top