ಕರಾವಳಿಯ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ ! ➤ ಹವಾಮಾನ ಇಲಾಖೆ ಸೂಚನೆ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.26. ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಮೈಸೂರು, ದಾವಣಗೆರೆ, ಚಾಮರಾಜನಗರ, ಮಂಡ್ಯ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.

Scroll to Top