ಇಬ್ಬರನ್ನು ಬಲಿ ಪಡೆದ ನರಭಕ್ಷಕ ಚಿರತೆ ಸೆರೆ

(ನ್ಯೂಸ್ ಕಡಬ)newskadaba.com  ಮೈಸೂರು, ಜ.26. ತಿ.ನರಸೀಪುರ ತಾಲೂಕು ಸೋಸಲೆ ಹೋಬಳಿಯಲ್ಲಿ ಇತ್ತೀಚೆಗೆ ಬಾಲಕ ಹಾಗೂ ವೃದ್ಧೆಯನ್ನು ಬಲಿ ಪಡೆದ ನರಭಕ್ಷಕ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.

ಬಲಿ ಪಡೆದ ಪ್ರದೇಶಗಳಲ್ಲಿ ಸುಮಾರು 19 ಬೋನ್ ಗಳನ್ನು ಇರಿಸಲಾಗಿತ್ತು. ಜತೆಗೆ ಇಪತ್ತಕ್ಕೂ ಹೆಚ್ಚು ಕ್ಯಾಮೆರಾ ಟ್ರ್ಯಾಪ್ ಅಳವಡಿಸಲಾಗಿತ್ತು. ಥರ್ಮಲ್ ಡ್ರೋನ್ ಕ್ಯಾಮೆರಾ ಬಳಸಿ ಚಿರತೆ ಅಡಗು ತಾಣ ಪತ್ತೆ ಹಚ್ವಿದ್ದ ಇಲಾಖೆ, ಆ ಸ್ಥಳದಲ್ಲಿ ತುಮಕೂರಿನಿಂದ ತರಿಸಿದ್ದ ದೊಡ್ಡ ಬೋನ್ ಅಳವಡಿಸಲಾಗಿತ್ತು.

ಚಿರತೆ ಸೆರೆ ಸಿಕ್ಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವೃದ್ಧೆಯನ್ನು ಬಲಿ ಪಡೆದಿದ್ದ ಚಿರತೆ ಮರುದಿನ ಬಾಲಕನ ಮೇಲೆ ದಾಳಿ ಮಾಡಿ ಕೊಂದಿದ್ದಲ್ಲದೇ, ಅರ್ಧ ದೇಹವನ್ನು ತಿಂದಿತ್ತು. ಘಟನೆಯನ್ನು ಗಂಭಿರವಾಗಿ ಪರಿಗಣಿಸಿದ್ದ ಸರ್ಕಾರ ಚಿರತೆ ಕಂಡಲ್ಲಿ ಗುಂಡಿಕ್ಕಿ ಕೊಲ್ಲುವಂತೆಯೂ ಅಧಿಕಾರಿಗಳಿಗೆ ಸೂಚಿಸಿತ್ತು.

Also Read  ಪುತ್ತೂರು: ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಮೃತ್ಯು                            

 

error: Content is protected !!