ವಿಮಾನದಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

(ನ್ಯೂಸ್ ಕಡಬ)newskadaba.com  ಟೋಕಿಯಾ, ಜ.27. ಟೋಕಿಯೊ-ನರಿಟಾದಿಂದ ದುಬೈಗೆ ತೆರಳುತ್ತಿದ್ದ ವೇಳೆ ಮಹಿಳಾ ಪ್ರಯಾಣಿಕರೋರ್ವರು ವಿಮಾನದಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾರೆ.

ಎಮಿರೇಟ್ಸ್ ವಿಮಾನದಲ್ಲಿ ಈ ಘಟನೆ ನಡೆದಿದೆ. ವಿಮಾನ ದುಬೈಗೆ ಆಗಮಿಸಿದ ಬಳಿಕ ತಾಯಿ ಮತ್ತು ಮಗುವನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಯಿತು. ವಿಮಾನ ಸಿಬ್ಬಂದಿ ಇಬ್ಬರನ್ನೂ ಸುರಕ್ಷಿತವಾಗಿ ನೋಡಿಕೊಂಡರು. ಇಬ್ಬರ ಆರೋಗ್ಯವೂ ಸ್ಥಿರವಾಗಿದೆ ಎಂದು ಎಮಿರೇಟ್ಸ್‌ ತಿಳಿಸಿದೆ. ಕೊಲೊರಾಡೊಗೆ ಪ್ರಯಾಣಿಸುತ್ತಿದ್ದ ಫ್ರಾಂಟಿಯರ್ ಏರ್‌ಲೈನ್ಸ್‌ ವಿಮಾನದಲ್ಲಿ ಶೌಚಾಲಯದಲ್ಲೇ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ್ದರು.

Scroll to Top