ಜಿಎಸ್​ಟಿ ಹೆಸರಿನಲ್ಲಿ ಖಾಸಗಿ ಕಂಪನಿಗೆ ರೂ.9.6 ಕೋಟಿ ವಂಚನೆ ➤ ಇಬ್ಬರ ಬಂಧನ         

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.27. ಜಿಎಸ್​ಟಿ ತೆರಿಗೆ ಕಟ್ಟಬೇಕೆಂದು ಹೇಳಿ ಅಸೋಸಿಯೇಟ್ ಚಾರ್ಟರ್ಡ್ ಅಕೌಂಟೆಂಟ್ ಸೋಗಿನಲ್ಲಿ ಖಾಸಗಿ ಸಂಸ್ಥೆಯೊಂದರ ಮಾಲೀಕರಿಗೆ ಬರೋಬ್ಬರಿ ರೂ.9.6 ಕೋಟಿ ವಂಚಿಸಿದ್ದ ಚಾರ್ಟೆಡ್ ಅಕೌಂಟೆಂಟ್ ಹಾಗೂ ಮತ್ತೊಬ್ಬ ವ್ಯಕ್ತಿಯನ್ನು ಸಂಜಯನಗರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ನಿಖಿಲ್ ಹಾಗೂ ವಿನಯ್ ಬಾಬು ಬಂಧಿತ ಆರೋಪಿಗಳಾಗಿದ್ದಾರೆ. ಪ್ರಕರಣ ಸಂಬಂಧ ಇನ್ನೂ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು ಇವರಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ಕೊರಿಯಾ ಮೂಲದ ಟರ್ಮಿನಸ್ ಡೆಚಾಂಗ್ ಸೀಟ್ ಎಂಬ ಆಟೋಮೋಟಿವ್ ಖಾಸಗಿ ಕಂಪನಿಗೆ ಅಸೋಸಿಯೇಟ್ ಚಾರ್ಟರ್ಡ್ ಅಕೌಂಟೆಂಟ್ ಆಗಿ ಇಬ್ಬರು ಸೇರಿಕೊಂಡಿದ್ದರು. ಹೀಗೆ, ಸೇರಿಕೊಂಡವರು ಜಿಎಸ್​ಟಿ ತೆರಿಗೆ ಕಟ್ಟಬೇಕೆಂದು ಕಂಪನಿ ಮಾಲೀಕರ ಬಳಿ ಸುಮಾರು 9 ಕೋಟಿ 60 ಲಕ್ಷ ಹಣವನ್ನ ಹಂತ ಹಂತವಾಗಿ ಪಡೆದಿದ್ದಾರೆ. ಇತ್ತೀಚೆಗೆ ಆರೋಪಿಗಳ ಲೆಕ್ಕದ ಬಗ್ಗೆ ಕಂಪನಿ ಮಾಲೀಕರಿಗೆ ಅನುಮಾನ ಬಂದಿದೆ. ಬಳಿಕ ಬೇರೊಬ್ಬ ಲೆಕ್ಕಾಧಿಕಾರಿ ಬಳಿ ಪರಿಶೀಲನೆ ನಡೆಸಿದಾಗ, ಆರೋಪಿಗಳ ಕೃತ್ಯ ಬಯಲಾಗಿದೆ.

error: Content is protected !!

Join the Group

Join WhatsApp Group