➤ಪ್ರವಾಸಿ ಮಂದಿರದಲ್ಲಿ PWD ಅಧಿಕಾರಿ ಆತ್ಮಹತ್ಯೆ!

(ನ್ಯೂಸ್ ಕಡಬ) newskadaba.com, ಬೆಂಗಳೂರು, .28.  ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿಯ ವ್ಯವಸ್ಥಾಪಕರೊಬ್ಬರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಶಿವಗಂಗಾ ಪ್ರವಾಸಿ ಮಂದಿರದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

ತುಮಕೂರು ಜಿಲ್ಲೆ ಮಧುಗಿರಿಯ ಲಕ್ಷ್ಮೀನರಸಿಂಹಯ್ಯ(56) ಆತ್ಮಹತ್ಯೆ ಮಾಡಿಕೊಂಡಿರುವ ಅಧಿಕಾರಿ ಎಂದು ತಿಳಿದು ಬಂದಿದೆ. ಕಚೇರಿಗೆ ಸಂಬಂಧಪಟ್ಟ ದಾಖಲಾತಿ ಪುಸ್ತಕ ಕಳೆದು ಹೋಗಿದ್ದು, ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಪೊಲೀಸರು ಪ್ರಕರಣ  ದಾಖಲಿಸಿಕೊಂಡಿದ್ದಾರೆ.

Scroll to Top