(ನ್ಯೂಸ್ ಕಡಬ) newskadaba.com, ಬೆಂಗಳೂರು, ಜ.28. ವೈದ್ಯಕೀಯ ವಿದ್ಯಾರ್ಥಿನಿಯನ್ನು ತಂದೆ ಮತ್ತು ಸಹೋದರ ಹಾಗೂ ಇತರ ಮೂವರು ಸಂಬಂಧಿಕರು ಸೇರಿ ಕತ್ತು ಹಿಸುಕಿ ಹತ್ಯೆಗೈದು ಬೆಂಕಿ ಹಚ್ಚಿದ ಘಟನೆ ಮಹಾರಾಷ್ಟ್ರದ ನಾಂದೇಡ್ ನಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿ ಪೊಲೀಸರು ಐವರನ್ನು ಬಂಧಿಸಿದ್ದಾರೆ.
ಬಿಎಚ್ ಎಂಎಸ್ ಮೂರನೇ ವರ್ಷದ ವಿದ್ಯಾರ್ಥಿನಿ ಶುಭಾಂಗಿನಿ ಗೆ ವಿವಾಹ ನಿಶ್ಚಯವಾಗಿತ್ತು. ಆದರೆ ಕುಟುಂಬ ಆಯ್ಕೆ ಮಾಡಿದ ವ್ಯಕ್ತಿಯೊಂದಿಗೆ ಶುಭಾಂಗಿನಿ ಮದುವೆಗೆ ಒಪ್ಪಲಿಲ್ಲ. ತಾನು ಇನ್ನೋರ್ವನನ್ನು ಪ್ರೀತಿಸುತ್ತಿರುವುದಾಗಿ ತಿಳಿಸಿದ್ದಳು. ಇದರಿಂದ ವಿವಾಹ ಮುರಿದು ಬಿದ್ದಿತ್ತು. ಇದರಿಂದ ಕೋಪಗೊಂಡ ಅವರು ಮಗಳನ್ನು ಸಾಯಿಸಿ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.