ನಿರುದ್ಯೋಗ ಸಮಸ್ಯೆ ➤ ಯುವಕ ನೇಣಿಗೆ ಶರಣು!

(ನ್ಯೂಸ್ ಕಡಬ) newskadaba.com, ಮೈಸೂರು. ಜ.30. ನಿರುದ್ಯೋಗ ಸಮಸ್ಯೆಯಿಂದ ಬೇಸತ್ತ ಯುವಕ ಲೋಹಿತ್ ರಾಜ್ (28) ಎಂಬಾತ ನೇಣಿಗೆ ಶರಣಾಗಿರುವ ಘಟನೆ ಮೈಸೂರಿನ ಜನತಾ ನಗರದಲ್ಲಿ ನಡೆದಿದೆ.

ಬಿಇ ಕಂಪ್ಯೂಟರ್ ಸೈನ್ಸ್ ಮುಗಿಸಿದ್ದ ಮೃತ ಲೋಹಿತ್ ರಾಜ್ ತನ್ನ ವಿದ್ಯಾರ್ಹತೆಗೆ ಅನುಗುಣವಾದ ಉದ್ಯೋಗ ಸಿಗದಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top