ಇಂದಿನಿಂದ‌ ಸಂಸತ್ ಬಜೆಟ್ ಅಧಿವೇಶನ ಆರಂಭ ➤ ಗರಿಕೆದರಿದ ನಿರೀಕ್ಷೆ

(ನ್ಯೂಸ್ ಕಡಬ)newskadaba.com ನವದೆಹಲಿ, ಜ.31. ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಸಂಸತ್ ನ ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ವರದಿ ತಿಳಿಸಿದೆ.

ನಾಳೆ ಬಹುನಿರೀಕ್ಷಿತ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿದ್ದಾರೆ. ಪ್ರಸಕ್ತ ವರ್ಷ ಕರ್ನಾಟಕ ಸಹಿತ 9 ರಾಜ್ಯಗಳ ಚುನಾವಣೆಗಳು ನಡೆಯಲಿದೆ. ಜತೆಗೆ ಮುಂದಿನ ವರ್ಷ ಲೋಕಸಭಾ ಚುನಾವಣೆಯೂ ಇದೆ. ಪ್ರಧಾನಿ ನರೇಂದ್ರ ಮೋದಿ ಅವರ ಎರಡನೇ ಅವಧಿಯ ಸರ್ಕಾರ ಕೊನೆಯ ಪೂರ್ಣ ಬಜೆಟ್ ಇದಾಗಿರುವ ಕಾರಣ ವೇತನದಾರರಿಗೆ ವೈಯಕ್ತಿಕ ಆದಾಯ ತೆರಿಗೆಯಲ್ಲಿ ಅನುಕೂಲವಾಗಬಹುದೇ, ಗೃಹ ಸಾಲ , ಹಿರಿಯ ನಾಗರಿಕರು ಸೇರಿದಂತೆ ಸಾಮಾನ್ಯ ಜನರಿಗೆ ವಿವಿಧ ತೆರಿಗೆ ಪರಿಹಾರ ಕ್ರಮಗಳೇನು ಸಿಗಬಹುದೇ ಎನ್ನುವ ನಿರೀಕ್ಷೆಗಳಿವೆ.

error: Content is protected !!

Join the Group

Join WhatsApp Group