(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.20. ಸದಸ್ಯರೋರ್ವರ ನಿಧನದಿಂದ ತೆರವುಗೊಂಡಿದ್ದ ಕೊಯಿಲ ಗ್ರಾಮ ಪಂಚಾಯತ್‌ನ ಒಂದು ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಲಿಂಗಪ್ಪ ಕುಂಬಾರ ಗೆಲುವು ಸಾಧಿಸಿದ್ದಾರೆ.
ಹಿಂದುಳಿದ ವರ್ಗ ‘ಎ’ ಗೆ ಮೀಸಲಾಗಿದ್ದ 4ನೇ ವಾರ್ಡ್‌ನಲ್ಲಿ ಪ್ರತಿನಿಧಿಸಿದ್ದ ಬಿಜೆಪಿ ಬೆಂಬಲಿತ ಸದಸ್ಯ ನಾಗೇಶ ಕುಂಬಾರರವರ ನಿಧನದ ಹಿನ್ನೆಲೆಯಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಲಿಂಗಪ್ಪ ಕುಂಬಾರರು ಕಾಂಗ್ರೆಸ್ ಅಭ್ಯರ್ಥಿ ದಯಾನಂದ ಸಾಲಿಯಾನ್‌ರವರನ್ನು 95 ಮತಗಳ ಅಂತರದಿಂದ ಸೋಲಿಸಿದರು.