ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಮಹಿಳೆ ಮೇಲೆ ಗುಂಡಿನ ದಾಳಿ

(ನ್ಯೂಸ್ ಕಡಬ)newskadaba.com ದೆಹಲಿ, ಜ.31. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವಿವಾಹಿತ ಮಹಿಳೆ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿದ ಪರಿಣಾಮ ಮಹಿಳೆ ಮೃತಪಟ್ಟ ಘಟನೆ ದೆಹಲಿಯ ಪಶ್ಚಿಮ ವಿಹಾರದಲ್ಲಿ ನಡೆದಿದೆ.

ಮೃತರನ್ನು ಜ್ಯೋತಿ(32) ಎಂದು ಗುರುತಿಸಲಾಗಿದೆ. ಫ್ಲಿಪ್‌ಕಾರ್ಟ್‌ನ ಕೊರಿಯರ್ ಇಲಾಖೆಯಲ್ಲಿ ಕೆಲಸ ಮಾಡುವ ಜ್ಯೋತಿ ಕೆಲಸ ಮುಗಿಸಿ ಸ್ಕೂಟರ್‌ ನಲ್ಲಿ ಮನೆಗೆ ಬರುತ್ತಿದ್ದ ವೇಳೆ ಬೈಕ್‌ ಹಾಗೂ ಸ್ಕೂಟಿಯಲ್ಲಿ ಬಂದ ದುಷ್ಕರ್ಮಿಗಳು ಜ್ಯೋತಿ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ. ಗಂಭೀರ ಗಾಯಗೊಂಡ ಜ್ಯೋತಿ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಅವರು ಕೊನೆಯುಸಿರೆಳೆದಿದ್ದಾರೆ.

 

Scroll to Top