ಕೇಂದ್ರ ಬಜೆಟ್; ದೇಶದಲ್ಲಿ 157 ಹೊಸ ನರ್ಸಿಂಗ್ ಕಾಲೇಜುಗಳ ಸ್ಥಾಪನೆ

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.01. ವೈದ್ಯಕೀಯ ಶಿಕ್ಷಣಕ್ಕೆ ವಿಶೇಷ ಒತ್ತು ನೀಡಲಾಗಿದ್ದು, ದೇಶದಲ್ಲಿ 157 ಹೊಸ ನರ್ಸಿಂಗ್ ಕಾಲೇಜುಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

2023-24ನೇ ಸಾಲಿನ ಬಜೆಟ್‌ನಲ್ಲಿ ಈ ವಿಚಾರ ಪ್ರಸ್ತಾಪಿಸಿರುವ ಅವರು, ದೇಶದಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ವಿಶೇಷ ಒತ್ತು ನೀಡಲಾಗುವುದು. ವೈದ್ಯಕೀಯ ಶಿಕ್ಷಣದಲ್ಲಿ ಹೊಸ ಪಠ್ಯಕ್ರಮವನ್ನು ಜಾರಿಗೆ ತರಲಾಗುವುದು. ದೇಶದಲ್ಲಿ ಹೊಸದಾಗಿ 157 ನರ್ಸಿಂಗ್ ಕಾಲೇಜುಗಳನ್ನು ಸ್ಥಾಪಿಸಲಾಗುವುದು. ಇದರಿಂದ ವೈದ್ಯಕೀಯ ರಂಗದಲ್ಲಿ ಸೇವೆ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.

error: Content is protected !!

Join the Group

Join WhatsApp Group