ಕೇಂದ್ರ ಬಜೆಟ್; ಮಹಿಳೆಯರಿಗಾಗಿ ವಿಶೇಷ ಉಳಿತಾಯ ಯೋಜನೆ ಪ್ರಕಟ

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.01. 2023-2024 ನೇ ಸಾಲಿನ ಕೇಂದ್ರ ಬಜೆಟ್‌ ನಲ್ಲಿ ಕೇಂದ್ರ ಸರ್ಕಾರವು ಮಹಿಳೆಯರಿಗಾಗಿ ವಿಶೇಷ ಉಳಿತಾಯ ಯೋಜನೆ ಪ್ರಕಟಿಸಿದೆ. 2 ವರ್ಷಗಳ ಅವಧಿಯ ಈ ಯೋಜನೆಗೆ ಶೇ 7.5 ಬಡ್ಡಿ ನಿಗದಿಪಡಿಸಲಾಗಿದೆ.

ಅಂಚೆ ಕಚೇರಿಗಳ ಮೂಲಕ ನಿರ್ವಹಿಸುವ ಮಾಸಿಕ ಆದಾಯ ಯೋಜನೆಯ ಹೂಡಿಕೆ ಮಿತಿಯನ್ನು 9 ಲಕ್ಷಕ್ಕೆ ಹೆಚ್ಚಿಸಲಾಗಿದ್ದು, ಈ ಮೊದಲು 4.5 ಲಕ್ಷ ಹೂಡಿಕೆಗೆ ಮಾತ್ರ ಅವಕಾಶವಿತ್ತು.

ಇನ್ನು ಸಣ್ಣ ಉಳಿತಾಯ ಯೋಜನೆಗಳಲ್ಲಿ ಹಿರಿಯ ನಾಗರಿಕರ ಹೂಡಿಕೆಗೆ ಇದ್ದ 15 ಲಕ್ಷದ ಮಿತಿಯನ್ನು ಈ ಬಾರಿಯಿಂದ 30 ಲಕ್ಷಕ್ಕೆ ಕೇಂದ್ರ ಸರ್ಕಾರವು ವಿಸ್ತರಿಸಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ ಘೋಷಿಸಿದ್ದಾರೆ.

Also Read  ಪ್ಯಾಲೆಸ್ತೀನ್ ಕಛೇರಿಯಲ್ಲಿ ಭಾರತದ ರಾಯಭಾರಿ ಶವವಾಗಿ ಪತ್ತೆ...!

 

error: Content is protected !!
Scroll to Top