ಎಲೆಕ್ಟ್ರಾನಿಕ್ಸ್ ಶೋ ರೂಮ್ ನಲ್ಲಿ ಅಗ್ನಿ ಅವಘಡ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಫೆ.02. ಬಂಟ್ವಾಳ ತಾಲೂಕಿನಲ್ಲಿ ಕಳೆದ ಕೆಲವು ವರ್ಷಗಳಿಂದ ಕಾರ್ಯಚರಿಸುತ್ತಿರುವ ಎಲೆಕ್ಟ್ರಾನಿಕ್ಸ್ ಅಂಗಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಬಿ.ಸಿ ರೋಡಿನ ಅನ್ನಪೂರ್ಣೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಇರುವ ಪ್ರೀತಂ ಎಂಬವರಿಗೆ ಸೇರಿದ ಪ್ರಿಯಾ ಎಲೆಕ್ಟ್ರಾನಿಕ್ಸ್ ಮಳಿಗೆಯ ಮೇಲಿನ ಅಂತಸ್ತಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಎಲೆಕ್ಟ್ರಾನಿಕ್ಸ್ ಜೊತೆಗೆ ಕೊಮಾಕಿ ಕಂಪೆನಿಗೆ ಸೇರಿದ ದ್ವಿಚಕ್ರವಾಹನಗಳ ದಾಸ್ತಾನು ಇರಿಸಲಾಗಿರುವ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.

ಕೊಮಾಕಿ ಕಂಪೆನಿಯ ಬ್ಯಾಟರಿ ಚಾಲಿತ ಸ್ಕೂಟರ್ ಗಳು ಇಲ್ಲಿದ್ದು, ಇದರ ಬ್ಯಾಟರಿ ಸ್ಪೋಟಗೊಂಡು ಬೆಂಕಿ ಹಚ್ಚಿಕೊಂಡಿದೆಯಾ ಎಂಬ ಸಂಶಯ ವ್ಯಕ್ತವಾಗಿದೆ. ಸಾರ್ವಜನಿಕರು ಬೆಂಕಿಯನ್ನು ನೋಡಿ ಅಗ್ನಿಶಾಮಕ ದಳದ ವರಿಗೆ ಸಂಪರ್ಕ ಮಾಡಿದ್ದಾರೆ. ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿಯನ್ನು ನಂದಿಸುವ ಪ್ರಯತ್ನ ಮಾಡುತ್ತಿದ್ದಾರೆ.

Also Read  ಏ.24(ಇಂದು)  ನಾಮಪತ್ರ  ಹಿಂಪಡೆಯಲು ಕೊನೆ ದಿನ.!

 

error: Content is protected !!
Scroll to Top