ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ➤ ಹತ್ತು ಜನರಿಗೆ ಗಂಭೀರ ಗಾಯ..!

(ನ್ಯೂಸ್ ಕಡಬ)newskadaba.com ದಾವಣಗೆರೆ, ಫೆ.02. ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ, ಹತ್ತು ಜನರಿಗೆ ಗಂಭೀರ ಗಾಯವಾಗಿರುವ ಘಟನೆ ಚನ್ನಗಿರಿ ತಾಲೂಕಿನ ಚಿಕ್ಕಬ್ಬಿಗೆರೆ ಕ್ರಾಸ್ ಬಳಿ ನಡೆದ ಘಟನೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಚಿಕ್ಕಬ್ಬಿಗೆರೆ ಕ್ರಾಸ್ ನಲ್ಲಿ ಕಾರುಗಳು ಡಿಕ್ಕಿ ರಭಸಕ್ಕೆ ಎರಡು ಕಾರಿನಲ್ಲಿದ್ದ ಹತ್ತು ಜನರಿಗೆ ಗಂಭೀರ ಗಾಯಗಳಾಗಿವೆ ಈಗ ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಢಿಕ್ಕಿಯಾದ ಪರಿಣಾಮ ಕಾರುಗಳ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಈ ಕುರಿತು ಸಂತೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top