ಆದೇಶ ಪಾಲಿಸದ ಇನ್ಸ್‌ಪೆಕ್ಟರ್ ವಿರುದ್ಧ ತನಿಖೆಗೆ ಹೈಕೋರ್ಟ್ ಆದೇಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ. 02. ಕಳ್ಳತನ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನೀಡಿದ್ದ ಆದೇಶ ಪಾಲಿಸದ ಕಾಟನ್‌ಪೇಟೆ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಕೆ. ವೈ. ಪ್ರವೀಣ್ ವಿರುದ್ಧ ಇಲಾಖಾ ತನಿಖೆ ನಡೆಸಲು ಹೈಕೋರ್ಟ್, ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶಿಸಿದೆ.


ಅಲ್ಲದೆ, ಕೋರ್ಟ್ ಸೂಚನೆ ಹೊರತಾಗಿಯೂ ಕ್ರಮಕ್ಕೆ ಮುಂದಾಗದ ಅಧಿಕಾರಿಯ ನಿರ್ಲಕ್ಷ್ಯತನವನ್ನು ತರಾಟೆಗೆ ತೆಗೆದುಕೊಂಡಿದೆ. ಇಲಾಖಾ ತನಿಖೆ ಪೂರ್ಣಗೊಂಡ ಬಳಿಕ ವರದಿಯನ್ನು ಹೈಕೋರ್ಟ್ ರಿಜಿಸ್ಟ್ರಾರ್‌ಗೆ ಸಲ್ಲಿಸುವಂತೆ ನಿರ್ದೇಶನ ನೀಡಿದೆ. ಕಾಟನ್‌ಪೇಟೆಯ ನಿವಾಸಿ ಎಂ. ಪ್ರಕಾಶ್ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣವೊಂದರ ಕುರಿತು ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಸೂಚನೆ ಮೇರೆಗೆ ನಡೆಯುತ್ತಿರುವ ತನಿಖೆ ಸಂಬಂಧ ಅರ್ಜಿಯ ವಿಚಾರಣೆ ನಡೆಸಿದ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

Scroll to Top