ಉಡುಪಿ: ಫೆ. 11, 12 ರಂದು ಪ್ರಥಮ ಯಕ್ಷಗಾನ ಸಮ್ಮೇಳನ

(ನ್ಯೂಸ್ ಕಡಬ)newskadaba.com ಉಡುಪಿ, ಫೆ.02. ಯಕ್ಷಗಾನ ವಿದ್ವಾಂಸ ಹಾಗೂ ಸಂಶೋಧಕ ಡಾ.ಎಂ.ಪ್ರಭಾಕರ ಜೋಶಿ ಅವರ ಅಧ್ಯಕ್ಷತೆಯಲ್ಲಿ ಫೆ.11 ಮತ್ತು 12 ರಂದು ಉಡುಪಿಯ ಎಂ.ಜಿ.ಎ ಕ್ರೀಡಾಂಗಣದಲ್ಲಿ ನಡೆಯುವ ಪ್ರಥಮ ಯಕ್ಷಗಾನ ಸಮ್ಮೇಳನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಸಮ್ಮೇಳನದ ಕಾರ್ಯಾಧ್ಯಕ್ಷ ಡಾ.ಜಿ.ಎಲ್.ಹೆಗಡೆ ಹೇಳಿದರು.

ನಗರದ ಎಂ.ಜಿ.ಎ. ಕಾಲೇಜಿನ ರವೀಂದ್ರ ಮಂಟಪದಲ್ಲಿ ಯಕ್ಷಗಾನ ಸಮ್ಮೇಳನದ ಪೂರ್ವಭಾವಿ ತಯಾರಿಯ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದರು. ಯಕ್ಷಗಾನ ಸಮ್ಮೇಳನವು ಸಾಹಿತ್ಯ ಸಮ್ಮೇಳನದ ಮಾದರಿಯಲ್ಲಿ ಅದ್ಧೂರಿ ಮೆರವಣಿಗೆಯೊಂದಿಗೆ ಪ್ರಾರಂಭವಾಗಲಿದ್ದು, ಮಾನ್ಯ ಮುಖ್ಯಮಂತ್ರ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಚಿವರು, ಶಾಸಕರು ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದರು.

Also Read  ದ.ಕ., ಉಡುಪಿ ಜಿಲ್ಲೆಯಲ್ಲಿ ಡಿ.21ರವರೆಗೆ ನಿಷೇಧಾಜ್ಞೆ

 

 

error: Content is protected !!
Scroll to Top