ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೊಬೈಲ್, ಚಿನ್ನಾಭರಣ ದೋಚಿದ ಖದೀಮರು ➤ ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಕಲಬುರಗಿ, ಫೆ.03. ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೊಬೈಲ್ ಮತ್ತು ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಇಬ್ಬರು ಸುಲಿಗೆಕೋರರನ್ನು ಸಬ್ ಅರ್ಬನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ಮತ್ತು ಸೈಯದ್ ಅಲ್ಲಾಫ್ (19) ಎಂಬುವವರನ್ನು ಬಂಧಿಸಿ ವಿವಿಧ ಕಂಪನಿಯ ಮೂರು ಮೊಬೈಲ್ ಜಪ್ತಿ ಮಾಡಿದ್ದಾರೆ.


ನಗರದ ರೇವಣಸಿದ್ದೇಶ್ವರ ಕಾಲೋನಿಯ ಶರಣಬಸಪ್ಪ ಉಪ್ಪಿನ್ ಎಂಬುವರು ರಘೋಜಿ ಶಾಲೆ ಹತ್ತಿರ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್ ಮೇಲೆ ಬಂದ ಇಬ್ಬರು ಅಪರಿಚಿತರು ಇವರ ಬಳಿ ಇದ್ದ 10 ಸಾವಿರ ರೂಪಾಯಿ ಮೌಲ್ಯದ ಮೊಬೈಲ್ ಮತ್ತು 25 ಸಾವಿರ ರೂ.ಮೌಲ್ಯದ 5 ಗ್ರಾಂ.ಬಂಗಾರದ ಹರಳಿನ ಉಂಗುರ ದೋಚಿ ಪರಾರಿಯಾಗಿದ್ದರು. ಈ ಸಂಬಂಧ ಶರಣಬಸಪ್ಪ ಉಪ್ಪಿನ ಅವರು ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು.

Also Read  ಮುಂದುವರಿದ ಕೊರೋನಾ ಆರ್ಭಟ ➤ ದ. ಕನ್ನಡದಲ್ಲಿ ಸಾವಿನ ಸಂಖ್ಯೆ 107ಕ್ಕೆ ಏರಿಕೆ

error: Content is protected !!
Scroll to Top