(ನ್ಯೂಸ್ ಕಡಬ) newskadaba.com, ಬೆಂಗಳೂರು. ಫೆ.3. ಬೆಂಗಳೂರು ಸಿಲಿಕಾನ್ ಸಿಟಿಯ ಬಹುದೊಡ್ಡ ಸಮಸ್ಯೆಯಾಗಿರುವ ಟ್ರಾಫೀಕ್ ನಿಂದಾಗಿ 1ವರ್ಷದ ಮಗುವೊಂದು ಮೃತಪಟ್ಟ ಘಟನೆ ನೆಲಮಂಗಲದಲ್ಲಿ ನಡೆದಿದೆ. ಟ್ರಾಫಿಕ್ ಜಾಮ್ ನಿಂದಾಗಿ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೇ ಒಂದು ವರ್ಷದ ಮಗು ದುರಂತ ಸಾವಿಗೀಡಾಗಿದೆ.
ಮಗುವನ್ನು ತುರ್ತು ಚಿಕಿತ್ಸೆಗೆಂದು ಹಾಸನದಿಂದ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ಆಂಬ್ಯುಲೆನ್ಸ್ ನಲ್ಲಿ ಕರೆತರಲಾಗುತ್ತಿತ್ತು. ಹಾಸನದಿಂದ ಕೇವಲ ಒಂದು ಗಂಟೆಯಲ್ಲೇ ಜೀರೋ ಟ್ರಾಫಿಕ್ ನಲ್ಲಿ ಮಗು ನೆಲಮಂಗಲ ತಲುಪಿತ್ತು. ಆದರೆ ನೆಲಮಂಗಲದಿಂದ ಗೊರಗುಂಟೆಪಾಳ್ಯ ರಸ್ತೆಯಲ್ಲಿ ಆಂಬ್ಯುಲೆನ್ಸ್ ಟ್ರಾಫಿಕ್ ನಲ್ಲಿ ಸಿಲುಕಿತು.ಇದರಿಂದ ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ಸಿಗದೆ ಮಗು ಪ್ರಾಣ ಬಿಟ್ಟಿದೆ. ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ದರೆ ಮಗು ಬದುಕುಳಿಯುವ ಸಾಧ್ಯತೆ ಇತ್ತು. ಆದರೆ ಆಂಬ್ಯುಲೆನ್ಸ್ ಗೆ ದಾರಿ ಸಿಗದೇ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.