(ನ್ಯೂಸ್ ಕಡಬ)newskadaba.com ಹಾಸನ, ಫೆ.04. ಬೆಂಗಳೂರಿನ ಟ್ರಾಫಿಕ್‌ನಿಂದಾಗಿ ಚಿಕಿತ್ಸೆ ಸಿಗದೆ ಒಂದೂವರೆ ವರ್ಷದ ಮಗು ಆಂಬ್ಯುಲೆನ್ಸ್‌ನಲ್ಲೇ ಮೃತಪಟ್ಟ ಘಟನೆ ನೆಲಮಂಗಲದಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಬುಲೇರೊ ಹಾಗು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ತಂದೆ ಅಹಮದ್, ತಾಯಿ ರುಕ್ಸಾನಾಗೆ ಗಂಭೀರ ಗಾಯಗಳಾಗಿತ್ತು.
ಮಗುವಿಗೂ ಪೆಟ್ಟಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ಹಾಸನದ ಹಿಮ್ಸ್‌ಗೆ ತಿಪಟೂರು ವೈದ್ಯರು ಕಳಿಸಿದ್ದರು. ಹಾಸನದಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಬೆಂಗಳೂರಿಗೆ ಸ್ಥಳಾಂತರಿಸಲು ಯತ್ನಿಸಲಾಗಿತ್ತು. ಆದರೆ ನೆಲಮಂಗಲದಿಂದ ಟ್ರಾಫಿಕ್ ನಡುವೆ ಆಂಬ್ಯುಲೆನ್ಸ್ ಸಿಲುಕಿಕೊಂಡು, ಚಿಕಿತ್ಸೆ ಸಿಗದೇ ದಾರಿಮಧ್ಯೆಯೇ ಮಗು ಪ್ರಾಣ ಬಿಟ್ಟಿದೆ ಎನ್ನಲಾಗಿದೆ.