ಮಂಗಳೂರು: ಜ್ಯುವೆಲ್ಲರಿ ಅಂಗಡಿಯ ಸಿಬ್ಬಂದಿ ಹತ್ಯೆ ಕೇಸ್ ➤ಆರೋಪಿಗಾಗಿ ಮುಂದುವರಿದ ಶೋಧ

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.05. ನಗರದ ಜ್ಯುವೆಲ್ಲರಿ ಅಂಗಡಿಯೊಂದರಲ್ಲಿ ಹಾಡಹಗಲೇ ಸಿಬ್ಬಂದಿ ರಾಘವೇಂದ್ರ ಆಚಾರ್ಯರನ್ನು ಚೂರಿಯಿಂದ ಇರಿದು ಕೊಲೆಗೈದು ತಲೆಮರೆಸಿಕೊಂಡಿರುವ ಆರೋಪಿಗಾಗಿ ಬಂದರು ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ ಎನ್ನಲಾಗಿದೆ.

ಘಟನೆ ವೇಳೆ ಅಂಗಡಿಯಲ್ಲಿದ್ದ ಒಟ್ಟು 12 ಗ್ರಾಂ ತೂಕದ 60,000 ರೂ. ಮೌಲ್ಯದ 3 ಚಿನ್ನದ ಸರಗಳನ್ನು ದರೋಡೆ ಮಾಡಲಾಗಿದೆ.

ಆರೋಪಿಯ ಪತ್ತೆಗಾಗಿ ಅಕ್ಕಪಕ್ಕದ ಅಂಗಡಿಗಳು ಸೇರಿದಂತೆ ಹಲವಾರು ಕಟ್ಟಡಗಳ ಸಿಸಿ ಕೆಮರಾ ದೃಶ್ಯಗಳನ್ನು ಪೊಲೀಸರು ಪರಿಶೀಲನೆ ನಡೆಸಿದ್ದು, ದುಷ್ಕರ್ಮಿ ಕೃತ್ಯ ನಡೆಸಿದ ಬಳಿಕ ತುಂಬಾ ದೂರದವರೆಗೂ ಓಡಿ ಹೋಗಿದ್ದು . ಆರೋಪಿಯ ಚಹರೆಯನ್ನು ಹೋಲುವ ಓರ್ವ ವ್ಯಕ್ತಿ ರಿಕ್ಷಾದಲ್ಲಿ ಹತ್ತಿ ಹೋಗಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿವೆ.

Also Read  ಶಕ್ತಿ ರೆಸಿಡೆನ್ಸಿಯಲ್ ಶಾಲೆಯಲ್ಲಿ "ಕೃಷ್ಣ ವರ್ಣಚಿತ್ರ ಚಾವಡಿ" ಉದ್ಘಾಟನೆ

 

 

error: Content is protected !!
Scroll to Top