ವಿದ್ಯುತ್ ಸ್ಪರ್ಶಿಸಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತ್ಯು

Death, deadbody, Waterfall

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.05. ಬೆಂಗಳೂರಿನ ಕೋಣನಕುಂಟೆ ಬಳಿಯ ಅಪಾರ್ಟ್ ಮೆಂಟ್ ನಲ್ಲಿ ವಿದ್ಯುತ್ ಶಾಕ್ ನಿಂದ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಕೋಣನಕುಂಟೆ ಬಳಿಯ ಪ್ರೆಸ್ಟೀಜ್ ಗ್ರೂಪ್ ನ ಅಪಾರ್ಟ್ ಮೆಂಟ್ ನಲ್ಲಿ ವಿದ್ಯುತ್ ಪ್ರವಹಿಸಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಕಾರ್ಮಿಕರನ್ನು ತುಮಕೂರು ಜಿಲ್ಲೆಯ ಮಧುಗಿರಿ ಮೂಲದ ರಘು ಹಾಗೂ ಅಸ್ಸಾಂ ಮೂಲದ ದಿಲೀಪ್ ಎಂದು ಗುರುತಿಸಲಾಗಿದೆ.

ಇಬ್ಬರು ಕಾರ್ಮಿಕರು ಅಪಾರ್ಟ್ ಮೆಂಟ್ ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು. ರಾತ್ರಿ ಪಾಳಿಯಲ್ಲಿ ಎಸ್ ಟಿಪಿ ಸಂಪ್ ಬಳಿ ಕೆಲಸ ಮಾಡುತ್ತಿದ್ದರು. ಚರಂಡಿ ಒಳಗೆ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಶಾಕ್ ನಿಂದ ಮೃತಪಟ್ಟಿದ್ದಾರೆ. ಸದ್ಯ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಇಬ್ಬರ ಶವಗಳನ್ನು ಇರಿಸಲಾಗಿದೆ. ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

 

 

Scroll to Top