ಉಳ್ಳಾಲ: ಟಯರ್ ಸಿಡಿದು ಟೆಂಪೋ ಪಲ್ಟಿ ➤ ರಸ್ತೆಯಲ್ಲಿ ಮೀನು ಚಲ್ಲಾಪಿಲ್ಲಿ

(ನ್ಯೂಸ್ ಕಡಬ)newskadaba.com ಉಳ್ಳಾಲ, ಫೆ.06. ತೊಕ್ಕೊಟ್ಟು ಕಲ್ಲಾಪು ಎಂಬಲ್ಲಿ ಮೀನು ಸಾಗಾಟ ನಡೆಸುತ್ತಿದ್ದ ಟೆಂಪೋ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದ ಘಟನೆ ವರದಿಯಾಗಿದೆ.

ಲಾರಿ ಚಾಲಕ ಸಾದಿಕ್ ಸ್ವಲ್ಪ ಗಾಯದಿಂದ ಪಾರಾಗಿದ್ದಾರೆ. ಮಂಗಳೂರು ಧಕ್ಕೆಯಿಂದ ಉಳ್ಳಾಲ ಫಿಷ್ ಮಿಲ್ ಗೆ ಮೀನು ಸಾಗಾಟ ನಡೆಸುತ್ತಿದ್ದ ಟೆಂಪೋ, ಚಾಲಕನ ನಿಯಂತ್ರಣ ತಪ್ಪಿ ವಾಲಿದ್ದು, ಈ ವೇಳೆ ಟಯರ್ ಸಿಡಿದು ರಸ್ತೆಗೆ ಉರುಳಿದೆ ಎನ್ನಲಾಗಿದೆ.

ಘಟನೆಯಿಂದ ರಸ್ತೆಯಲ್ಲಿ ಮೀನು ಚಲ್ಲಾಪಿಲ್ಲಿಯಾಗಿ ಹರಡಿಕೊಂಡಿದ್ದು ರಸ್ತೆ ಸಂಚಾರದಲ್ಲಿ ಅಡಚಣೆಯುಂಟಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ಪೊಲೀಸರು ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.

 

 

Scroll to Top