ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ➤ ಸ್ಥಳದಲ್ಲೇ ಟೆಕ್ಕಿ ಮೃತ್ಯು..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.06. ವೇಗವಾಗಿ ದ್ವಿಚಕ್ರ ವಾಹನ ಚಾಲನೆ ಮಾಡುವಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸಾಫ್ಟ್ ವೇರ್ ಇಂಜಿನಿಯರ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹೆಣ್ಣೂರು ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ನಾಗೇನಹಳ್ಳಿ ನಿವಾಸಿ ರಮೇಶ್ (28) ಮೃತ ದುರ್ದೈವಿ ಎಂದು ತಿಳಿದುಬಂದಿದೆ. ವೃತ್ತಿಯಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ಆಗಿರುವ ರಮೇಶ್ ಕೆಲಸ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ಬರುವಾಗ ಮಾರ್ಗ ಮಧ್ಯೆ ನಾಗೇನಹಳ್ಳಿ ಕ್ರಾಸ್ ಬಳಿ ಈ ಘಟನೆ ನಡೆದಿದೆ.

Scroll to Top