(ನ್ಯೂಸ್ ಕಡಬ)newskadaba.com ಶಿರ್ವ,ಫೆ.07. ಕುಡಿದ ಮತ್ತಿನಲ್ಲಿ ಬಾವಿಗೆ ಹಾರಿದ ಯುವಕ ಮೃತಪಟ್ಟ ಘಟನೆ ವರದಿಯಾಗಿದೆ.
ತೊಟ್ಲಗುರಿ ನಿವಾಸಿಯಾದ ರಾಜು(45) ತನ್ನ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು,ಬಾವಿಗೆ ಹಾರುವ ವೇಳೆ ಮದ್ಯಪಾನ ಮಾಡಿದ್ದರು ಎನ್ನಲಾಗಿದೆ.
ಕಾಪುವಿನ ಸಮಾಜ ಸೇವಕ ಸೂರಿ ಶೆಟ್ಟಿ ಹಾಗೂ ಅಶೋಕ್ ಶೆಟ್ಟಿ ಮೃತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಿದ್ದು ಉಡುಪಿಯ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ. ಶಿರ್ವ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.