(ನ್ಯೂಸ್ ಕಡಬ) newskadaba.com. ಹಾವೇರಿ, ಫೆ.7. ಧಾರ್ಮಿಕ ಕಾರ್ಯಕ್ರಮಗಳು, ಪೂಜೆ, ಮದುವೆ, ಮತ್ತಿತರ ಶುಭ ಸಮಾರಂಭಗಳಲ್ಲಿ ಅಗ್ರಸ್ಥಾನ ಪಡೆದಿರುವ ವೀಳ್ಯದೆಲೆ, ಎಲೆ ಬೆಲೆಯಲ್ಲಿ ಹೆಚ್ಚಳವಾಗಿದೆ.
ಹೌದು, ಕಳೆದ 15 ದಿನದಿಂದ ಜಿಲ್ಲೆಯ ಮಾರುಕಟ್ಟೆಯಲ್ಲಿ ವೀಳ್ಯದೆಲೆಯ ಬೆಲೆ ಬರೋಬ್ಬರಿ ಮೂರು ಪಟ್ಟು ಹೆಚ್ಚಳ ಕಂಡಿದ್ದು, ಬಲೆ ಏರಿಕೆಯ ತಾಪ ಇದೀಗ ಗ್ರಾಹಕರ ಜೇಬಿಗೆ ಕತ್ತರಿ ಹಾಕುತ್ತಿದೆ. ಒಂದು ಕಟ್ಟಿನ ವೀಳ್ಯದೆಲೆ ಸಾಮಾನ್ಯವಾಗಿ ಮಾರುಕಟ್ಟೆಯಲ್ಲಿ 40-50 ರೂ.ಗೆ ಮಾರಾಟವಾಗುತ್ತದೆ. ಬೇಸಿಗೆ ಬಂದರೆ ಅಬ್ಟಾಬ್ಟಾ ಅಂದರೂ 60-80ರೂ. ಒಳಗೆ ಮಾರಾಟ ಆಗಿರುವುದನ್ನು ನಾವು ನೋಡಿದ್ದೇವೆ, ಕೇಳಿದ್ದೇವೆ. ಆದರೀಗ, ಮಾರುಟ್ಟೆಯಲ್ಲಿ ವೀಳ್ಯದೆಲೆಗೆ ಬಂಗಾರದ ಬೆಲೆ ಬಂದಿದ್ದು, ಗ್ರಾಹಕರು ವೀಳ್ಯದೆಲೆಯ ಬೆಲೆ ಕೇಳಿ ತತ್ತರಿಸಿ ಹೋಗಿದ್ದಾರೆ.