ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ➤ 30 ಮಂದಿ ಸಾವು, 15 ಜನರಿಗೆ ಗಂಭೀರ ಗಾಯ



(ನ್ಯೂಸ್ ಕಡಬ)newskadaba.com ಪಾಕಿಸ್ತಾನ, ಫೆ.08.  ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಪರಿಣಾಮ 30 ಮಂದಿ ಮೃತಪಟ್ಟಿದ್ದು, 15 ಜನರಿಗೆ ಗಂಭೀರ ಗಾಯಗಳಾಗಿವೆ. ಖೈಬರ್ ಪಖ್ತುಂಖ್ವಾದ ಕೊಹಿಸ್ತಾನ್ ಜಿಲ್ಲೆಯ ಕಾರಕೋರಂ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಗಿಲ್ಗಿಟ್‌ನಿಂದ ರಾವಲ್ಪಿಂಡಿಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕ ಬಸ್ ಪ್ರಾಂತ್ಯದ ಶಿತಿಯಾಲ್ ಪ್ರದೇಶದಲ್ಲಿ ಎದುರು ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಮಾಹಿತಿ ಲಭ್ಯವಾಗಿದೆ.







ಈ ಘಟನೆ ಸಂಬಂಧ ಪಾಕಿಸ್ತಾನದ ಅಧ್ಯಕ್ಷ ಡಾ. ಆರಿಫ್ ಅಲ್ವಿ, ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಗಿಲ್ಗಿಟ್-ಬಾಲ್ಟಿಸ್ತಾನ್ ಮುಖ್ಯಮಂತ್ರಿ  ಬಸ್ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರಿಗೆ ಸಂತಾಪ ಸೂಚಿಸಿದರು. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು .






 

 

 

error: Content is protected !!
Scroll to Top