(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23. ದಕ್ಷಿಣ ಕನ್ನಡ ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿ ಇರುವ 9 ಅಂಗನವಾಡಿ ಕಾರ್ಯಕರ್ತೆ ಹಾಗೂ 23 ಅಂಗನವಾಡಿ ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜನವರಿ 22 ದಿನವಾಗಿದ್ದು, ಆಸಕ್ತರು ಕೆಳಗಿನ ವೆಬ್‍ಸೈಟ್ ವಿಳಾಸವನ್ನು ಸಂಪರ್ಕಿಸಬಹುದಾಗಿದೆ. http://www.anganwadirecruit.kar.nic.in ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾ ಕಛೇರಿಯನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.