(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24. ಉದ್ಯಮಿಯೋರ್ವರ ಮನೆಗೆ 3 ಸುತ್ತು ಗುಂಡು ಹಾರಾಟ ನಡೆಸಿರುವ ಘಟನೆ ನಗರದ ಹೊರವಲಯದ ಮುಲ್ಕಿ ಬಸ್ ನಿಲ್ದಾಣದ ಬಳಿ ಶನಿವಾರ ರಾತ್ರಿ ನಡೆದಿದೆ.
ಬೈಕಿನಲ್ಲಿ ಆಗಮಿಸಿದ ಇಬ್ಬರು ದುಷ್ಕರ್ಮಿಗಳು ಮುಲ್ಕಿ ನಿವಾಸಿ ಉದ್ಯಮಿಯಾಗಿ ಗುರುತಿಸಿಕೊಂಡಿರುವ ನಾಗರಾಜ್ ಮನೆಗೆ ಶೂಟೌಟ್ ನಡೆಸಿದ್ದು, ಇದರಿಂದಾಗಿ ಮನೆಯ ಬಾಗಿಲಿಗೆ ಹಾಗೂ ಕಾರಿಗೆ ಗುಂಡು ತಗುಲಿ ಹಾನಿಯಾಗಿವೆ. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಟಿ.ಆರ್.ಸುರೇಶ್, ಅಪರಾಧ ವಿಭಾಗದ ಡಿಸಿಪಿ ಉಮಾಪ್ರಶಾಂತ್ ಮತ್ತಿತರ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆಗೆ ನಡೆಸುತ್ತಿದ್ದಾರೆ.