(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಫೆ.10. ನಗರ ಸಮೀಪದ ಚುರ್ಚೆಗುಡ್ಡ ಅರಣ್ಯ ಪ್ರದೇಶದಲ್ಲಿ ನಿನ್ನೆ ರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆಗೆ ಸುಮಾರು 25 ಎಕರೆ ಪ್ರದೇಶದಲ್ಲಿದ್ದ ಕುರುಚಲು ಕಾಡು ಸುಟ್ಟು ಭಸ್ಮವಾಗಿದೆ. ಈ ನಡುವೆ ಬೆಂಕಿಯ ಹಿಂದೆ ಕಿಡಿಗೇಡಿಗಳ ಕೃತದ ಶಂಕೆ ವ್ಯಕ್ತವಾಗಿದೆ.
ನಗರದ ಹೊರವಲಯದಲ್ಲಿರುವ ಪವಿತ್ರವನ ಸಮೀಪದ ಚುರ್ಚೆಗುಡ್ಡೆ ಅರಣ್ಯ ಪ್ರದೇಶದಲ್ಲಿ ಈ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ನಂದಿಸಲು ಅರಣ್ಯ ಇಲಾಖೆಯ ಸಿಬ್ಬಂದಿ ಕಳೆದ ರಾತ್ರಿ ಹರಸಾಹಸ ಪಟ್ಟಿದ್ದು ಬೆಂಕಿಯನ್ನು ಸದ್ಯ ನಿಯಂತ್ರಿಸಲಾಗಿದೆ ಎಂದು ವರದಿಯಾಗಿದೆ. ಯಾವುದೇ ವನ್ಯಜೀವಿಗಳು ಬೆಂಕಿಗೆ ಸಿಲುಕಿ ಮೃತಪಟ್ಟಿಲ್ಲ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.