➤ ಭೂಕಂಪ ಪೀಡಿತ ಟರ್ಕಿಯಲ್ಲಿ ಬೆಂಗಳೂರು ಮೂಲದ ಟೆಕಿ ನಾಪತ್ತೆ!

ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.10.   ಭೂಕಂಪ ಪೀಡಿತ ಟರ್ಕಿಗೆ  ಔದ್ಯೋಗಿಕ ಕೆಲಸ ನಿಮಿತ್ತ ಹೋಗಿದ್ದ ಬೆಂಗಳೂರಿನ ಎಂಜಿನಿಯರ್ ವಿಜಯ್‌ಕುಮಾರ್ (36 ವರ್ಷ) ಎಂಬುವವರು ನಾಪತ್ತೆಯಾಗಿದ್ದಾರೆ.

ಪೀಣ್ಯದಲ್ಲಿರುವ ಆಮ್ಲಜನಕ ಹಾಗೂ ನೈಟ್ರೋಜನ್ ತಯಾರಿಕೆ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ವಿಜಯ್‌ಕುಮಾರ್, ಕಂಪನಿಯ ಹೊಸ ಘಟಕ ಸ್ಥಾಪನೆ ಕೆಲಸಕ್ಕಾಗಿ ಟರ್ಕಿಗೆ ಹೋಗಿದ್ದರು. ಇದೇ ಟರ್ಕಿಯಲ್ಲಿ ಭೂಕಂಪ ಸಂಭವಿಸಿದ್ದು, ವಿಜಯ್‌ಕುಮಾರ್ ಎಲ್ಲಿದ್ದಾರೆಂಬ ಮಾಹಿತಿ ಇದುವರೆಗೂ ಲಭ್ಯವಾಗಿಲ್ಲ.

Scroll to Top