ಭಾರೀ ಭೂಕಂಪದ ಅಪಾಯದಲ್ಲಿ ಭಾರತ! ➤ ಹಿಮಾಲಯ ಪ್ರದೇಶಕ್ಕೆ ಹೆಚ್ಚು ಭೀತಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.11.  ಉತ್ತರಾಖಂಡದ ಜೋಶಿಮಠದಲ್ಲಿ ಭೂಮಿ ಕುಸಿದು ನೂರಾರು ಮನೆಗಳ ಗೋಡೆಗಳಲ್ಲಿ ಬಿರುಕುಬಿಟ್ಟಿದ್ದ  ನೆನಪು ಇನ್ನೂ ಮಾಸಿಲ್ಲ. ಅಷ್ಟರಲ್ಲೇ ಮತ್ತೊಂದು ಆತಂಕಕಾರಿ ಮಾಹಿತಿಯನ್ನು ಐಐಟಿ ಕಾನ್ಪುರದ ಭೂವಿಜ್ಞಾನಿ ಜಾವೇದ್ ಮಲಿಕ್  ಬಹಿರಂಗಪಡಿಸಿದ್ದಾರೆ. ಭಾರೀ  ಭೂಕಂಪದ ಅಪಾಯದಲ್ಲಿ ಭಾರತವಿದೆ. ಟರ್ಕಿ, ಸಿರಿಯಾದಂತೆಯೇ ಭಾರತದಲ್ಲಿಯೂ ಭೂಕಂಪಗಳು ಸಂಭವಿಸುವ ಸಾಧ್ಯತೆ ಇದೆ ಎಂದು ಮಲಿಕ್ ತಿಳಿಸಿದ್ದಾರೆ

ದೇಶದಲ್ಲಿ ಸಂಭವಿಸಿದ ಭೂಕಂಪಗಳ, ಭೂಮಿಯಲ್ಲಿನ ಬದಲಾವಣೆಗಳು ಮತ್ತು ಪರಿಣಾಮಗಳ ಬಗ್ಗೆ ದೀರ್ಘಾವಧಿಯಿಂದ ಮಲಿಕ್ ಅವರು ಸಂಶೋಧನೆ ನಡೆಸುತ್ತಿದ್ದಾರೆ. ದೇಶದ ಕೆಲವು ಪ್ರದೇಶಗಳಲ್ಲಿ 7.5ಕ್ಕಿಂತಲೂ ಹೆಚ್ಚಿನ ತೀವ್ರತೆಯ ಭೂಕಂಪಗಳು ಸಂಭವಿಸುವ ಸಾಧ್ಯತೆ ಇದೆ ಎಂದು ಅವರು ಮುನ್ಸೂಚನೆ ನೀಡಿದ್ದಾರೆ.

 

error: Content is protected !!

Join the Group

Join WhatsApp Group