ಭಾರತ, ಆಸ್ಟ್ರೇಲಿಯಾ ಮೊದಲ ಪಂದ್ಯ ➤ 400 ರನ್​ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿದ ಭಾರತ

(ನ್ಯೂಸ್ ಕಡಬ) newskadaba.com. ನವದೆಹಲಿ, ಫೆ.11.  ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ  ನಡುವಿನ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ 400 ರನ್​ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದೆ. ಈ ಮೂಲಕ ಭಾರತ ಮೊದಲ ಇನ್ನಿಂಗ್ಸ್​ನಲ್ಲಿ 223 ರನ್ ಮುನ್ನಡೆ ಸಾಧಿಸಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಮಾಡಿ ಕೇವಲ 177 ರನ್‌ಗಳಿಗೆ ಆಲೌಟ್​ ಆಗಿತ್ತು. ಇದಕ್ಕೆ ಉತ್ತರವಾಗಿ ಭಾರತ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 400 ರನ್ ಗಳಿಸಿದೆ. ಈ ಮುನ್ನಡೆಯನ್ನು ಗಮನಿಸಿದರೆ ಆಸ್ಟ್ರೇಲಿಯಾ ವಿರುದ್ಧ ಭಾರತದ ಗೆಲುವು ನಿಶ್ಚಿತ ಎಂತಲೇ ಹೇಳಲಾಗುತ್ತಿದೆ. 2010ರ ನಂತರ ಭಾರತ ತಂಡದ ಟೆಸ್ಟ್‌ ದಾಖಲೆಯನ್ನು ಗಮನಿಸಿದರೆ, ನಾಗ್ಪುರ ಟೆಸ್ಟ್‌ಗೆ ಮೊದಲು, ಭಾರತ 2010 ರಿಂದ 10 ಟೆಸ್ಟ್‌ಗಳಲ್ಲಿ 200 ಕ್ಕೂ ಹೆಚ್ಚು ರನ್‌ಗಳ ಮುನ್ನಡೆ ಸಾಧಿಸಿದ್ದು, ಈ ಎಲ್ಲಾ ಪಂದ್ಯಗಳಲ್ಲಿ ಭಾರತ ಗೆಲುವು ಸಾಧಿಸಿದೆ.

error: Content is protected !!

Join the Group

Join WhatsApp Group