ಹಿಟ್ ಅಂಡ್ ರನ್ ಪ್ರಕರಣ ➤ ಮೂವರು ಯುವಕರು ಮೃತ್ಯು..!

(ನ್ಯೂಸ್ ಕಡಬ) newskadaba.com. ದಾವಣಗೆರೆ.  ಫೆ.11.ನಗರದ ಹೊರವಲಯದ ಆನಗೋಡು ಸಮೀಪ ರಾಷ್ಟ್ರೀಯ ಹೆದ್ದಾರಿ 48ರಲ್ಲಿ  ಅಪಘಾತ ಸಂಭವಿಸಿ, ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು 24 ವರ್ಷದ ಪರಶುರಾಮ್, 23 ವರ್ಷದ ಸಂದೇಶ್ ಮತ್ತು 26 ವರ್ಷದ ಶಿವು ಎಂದು ಗುರುತಿಸಲಾಗಿದೆ. ಇವರೆಲ್ಲರೂ ದಾವಣಗೆರೆ ಸಮೀಪದ ರಾಮನಗರ ನಿವಾಸಿಗಳು ಎನ್ನಲಾಗಿದೆ. ಯುವಕರು ಕಾಟಿಹಳ್ಳಿ ಗ್ರಾಮಕ್ಕೆ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಹೋಗಿ ಮನೆಗೆ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ.  ಈ ಮೂವರು ಯುವಕರು ದಾವಣಗೆರೆ ತಾಲ್ಲೂಕಿನ ಕಾಟಿಹಳ್ಳಿ ಗ್ರಾಮದಲ್ಲಿ ಸಂಬಂಧಿಕರ ಮನೆಯಲ್ಲಿನ ಕಾರ್ಯಕ್ರಮವೊಂದರಲ್ಲಿ ಊಟ ಮಾಡಿ ವಾಪಸ್ಸಾಗುತ್ತಿದ್ದ ವೇಳೆ ಈ ಅವಗಢ ನಡೆದಿದೆ. ಸ್ಥಳಕ್ಕೆ ದಾವಣಗೆರೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಾವಳಿ ಹಾಗೂ ಸ್ಥಳೀಯರ ಹೇಳಿಕೆಗಳನ್ನು ಪೊಲೀಸರು ಸಂಗ್ರಹಿಸುತ್ತಿದ್ದಾರೆ.

error: Content is protected !!

Join the Group

Join WhatsApp Group