ತುಮಕೂರು: ಬೋನಿಗೆ ಬಿದ್ದ  ಚಿರತೆ ➤ಕೊಂಚ ನಿರಾಳರಾದ ಗ್ರಾಮಸ್ಥರು

(ನ್ಯೂಸ್ ಕಡಬ) newskadaba.com ತುಮಕೂರು, ಫೆ.12.  ಜಿಲ್ಲೆಯ ಗುಬ್ಬಿ ತಾಲೂಕಿನ ಮಡೇನಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಇಟ್ಟಿದ್ದ ಬೋನಿಗೆ ಹೆಣ್ಣು ಚಿರತೆ ಬಿದ್ದಿದ್ದು, ಹಲವು ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆ ಕೊನೆಗೂ ಸೆರೆಯಾಗಿದೆ.

ಇತ್ತೀಚಿನ  ದಿನಗಳಲ್ಲಿ ಕುರಿ, ಮೇಕೆ, ನಾಯಿ ಮೇಲೆ ದಾಳಿ ಮಾಡಿದ್ದ ಚಿರತೆಯಿಂದ ಬೇಸತ್ತಿದ್ದ ಗ್ರಾಮಸ್ಥರು ಇದೀಗ ಚಿರತೆ ಸೆರೆಯಿಂದ ಕೊಂಚ ನಿರಾಳರಾಗಿದ್ದಾರೆ. ಇನ್ನು ಗುಬ್ಬಿ ವಲಯ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಚಿರತೆಯನ್ನು ಸುರಕ್ಷಿತವಾಗಿ ಸ್ಥಳಾಂತರ ಮಾಡಿದ್ದಾರೆ.

Also Read  ಕ್ರೀಡಾ ತರಬೇತಿ ಕೇಂದ್ರ – ಅರ್ಜಿ ಆಹ್ವಾನ

 

 

error: Content is protected !!
Scroll to Top