ವಿದ್ಯಾರ್ಥಿವೇತನ ಮುಂದುವರಿಸಲು ಪ್ರತಿಭಟನೆ

(ನ್ಯೂಸ್ ಕಡಬ) newskadaba.com ರಾಯಚೂರು, ಫೆ.12. ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನವನ್ನು ಮುಂದುವರಿಸಬೇಕೆಂದು ಎಸ್ ಐಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನವನ್ನು ರದ್ದುಪಡಿಸಿರುವ ಕೇಂದ್ರ ಸರ್ಕಾರದ ಯೋಜನೆಯನ್ನು ರಾಜ್ಯ ಸರ್ಕಾರ ಮುಂದುವರೆಸುವಂತೆ ಎಸ್.ಐ.ಓ. ಆಗ್ರಹಿಸಿತು.


ಅಲ್ಪಸಂಖ್ಯಾತರ ಮತ್ತು ಬುಡಕಟ್ಟು ವ್ಯವಹಾರಗಳ ಹಾಗೂ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದಿಂದ ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್ ನ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಯಲ್ಲಿ ಬರುವ 1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಕೊಡುತ್ತಿದ್ದ ವಿದ್ಯಾರ್ಥಿ ವೇತನವನ್ನು 2022-23ರ  ಶಕ್ಷಣಿಕ ವರ್ಷದಿಂದ ರದ್ದುಗೊಳಿಸುವ ಸುತ್ತೋಲೆಯನ್ನು ಹೊರಡಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಖಂಡಸಿ ಕೇಂದ್ರ ಸರಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Also Read  ಕರ್ನಾಟಕ ಬಂದ್ ಗೆ ಕರೆ ನೀಡಿದವರ ಆಸ್ತಿ ಜಪ್ತಿ ಮಾಡಿ ➤ ಡಿ.5ರ ಬಂದ್ ವಿರೋಧಿಸಿ ಪ್ರತಿಭಟನೆ

error: Content is protected !!
Scroll to Top